ಬೆಂಗಳೂರಿಗರೇ ಎಚ್ಚರ : ಇನ್ನು ಎರಡು ದಿನ ಭಾರಿ ಮಳೆ

Published : May 18, 2019, 09:01 AM IST
ಬೆಂಗಳೂರಿಗರೇ ಎಚ್ಚರ :  ಇನ್ನು ಎರಡು ದಿನ ಭಾರಿ ಮಳೆ

ಸಾರಾಂಶ

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಬೆಂಗಳೂರು :  ರಾಜಧಾನಿ ಬೆಂಗಳೂರಿನ ಹಲವೆಡೆ ಶುಕ್ರವಾರ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಭಾಗಶಃ ಅಸ್ತವ್ಯಸ್ತಗೊಂಡಿತ್ತು. ಮಧ್ಯಾಹ್ನದಿಂದ ರಾತ್ರಿ ವರೆಗೂ ಬಿಟ್ಟು ಬಿಟ್ಟು ಸುರಿದ ಗಾಳಿ ಮಳೆಗೆ ವಿವಿಧೆಡೆ ಮರಗಳು ಹಾಗೂ ವಿದ್ಯುತ್‌ ಕಂಬಗಳು ನೆಲಕಚ್ಚಿವೆ. 

ಮರ ಬಿದ್ದುದರಿಂದ ಎರಡು ಕಾರುಗಳು ಜಖಂಗೊಂಡಿವೆ. ಮಲ್ಲೇಶ್ವರದ ಲಿಂಕ್‌ ರಸ್ತೆಯಲ್ಲಿ ರಾಜಕಾಲುವೆ ಉಕ್ಕಿ ಹರಿದು ಅಕ್ಕಪಕ್ಕದ ಕೆಲ ಮನೆಗಳಿಗೆ ನೀರು ನುಗ್ಗಿ ಅಲ್ಲಿನ ನಿವಾಸಿಗಳು ರಾತ್ರಿಯಿಡೀ ಸಮಸ್ಯೆ ಅನುಭವಿಸಿದ್ದಾರೆ.

ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಮಳೆ ತರುವ ಸ್ಟ್ರಫ್‌ (ಗಾಳಿಯ ಕಡಿಮೆ ಒತ್ತಡದ ತಗ್ಗು) ಏರ್ಪಟ್ಟಿದ್ದು, ಇದು ದಕ್ಷಿಣ ಒಳನಾಡಿನ ಮೂಲಕ ಹಾದು ಹೋಗುತ್ತಿದೆ. ಹಾಗಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

PREV
click me!

Recommended Stories

ಕುಮಾರ ಪರ್ವತ ಯಾತ್ರೆ, ಬೆಟ್ಟದ ತುದಿಯಲ್ಲಿರುವ ದೇವರ ಪಾದಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಂಪನ್ನ
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!