
ಮಂಗಳೂರು(ಅ.19): ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಗಲಿದ ಸ್ಯಾಕ್ಸೋಫೋನ್ ಮಾಂತ್ರಿಕ ಪದ್ಮಶ್ರೀ ಕದ್ರಿ ಗೋಪಾಲನಾಥ್ ಅವರ ಪದವಿನಂಗಡಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ಬೆಳಗ್ಗೆ ಕಾರ್ಯಕರ್ತರ ಸಭೆ ಆಯೋಜಿಸಲಾಗಿದ್ದರೂ ಬಳಿಕ ವಿವಿಧ ಕಾರಣಗಳಿಂದ ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು. ಅದರಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಬಳಿಕ ಕದ್ರಿ ಗೋಪಾಲನಾಥ್ ಮನೆಗೆ ತೆರಳಿ ಮನೆ ಮಂದಿಯೊಂದಿಗೆ ಮಾತುಕತೆ ನಡೆಸಿದ್ದಾರೆ.
'JDS ಶಾಸಕರು BJP ಸಚಿವರನ್ನು ಭೇಟಿ ಮಾಡೋದು ಅನಿವಾರ್ಯ'..!
ಬಳಿಕ ಅನಾರೋಗ್ಯದಲ್ಲಿರುವ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿಅವರು ಚಿಕಿತ್ಸೆ ಪಡೆಯುತ್ತಿರುವ ನಗರದ ಖಾಸಗಿ ಆಸ್ಪತ್ರೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದಾರೆ.
ನಂತರ ಮಾಜಿ ಶಾಸಕ ಜೆ.ಆರ್. ಲೋಬೊ ಮನೆಯಲ್ಲಿ ಊಟ ಮುಗಿಸಿ, ಅಲ್ಲಿಂದ ಕೇರಳ ಕಾಸರಗೋಡು ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ತೆರಳಿದ್ದಾರೆ.
BSY ಮೋದಿ, ಅಮಿತ್ ಶಾ ಅವರ ಅನ್‌ವಾಂಟೆಡ್ ಚೈಲ್ಡ್ ಎಂದ ಸಿದ್ದು