ಚೆನ್ನೈ(ಮೇ.27): ಬೆಂಗಳೂರು ಮೂಲದ ಎದರ್ ಎಲೆಕ್ಟ್ರಿಕ್ ಸ್ಕೂಟರ್ ಎಕ್ಸ್‌ಪೀರಿಯನ್ಸ್ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಲವು ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿದೆ. ಚೆನ್ನೈನಲ್ಲಿರುವ ಎದರ್ ಎಕ್ಸ್‌ಪೀರಿಯನ್ಸ್ ಕೇಂದ್ರದಲ್ಲಿ ಈ ಘಟನೆ ನಡೆದಿದೆ.
ಚೆನ್ನೈನಲ್ಲಿ ಎಕ್ಸ್‌ಪೀರಿಯನ್ಸ್ ಕೇಂದ್ರದಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಕ್ಸ್‌ಪೀರಿಯನ್ಸ್ ಕೇಂದ್ರದಲ್ಲಿದ್ದ ಉದ್ಯೋಗಿಗಳು ಹೊರಬಂದಿದ್ದಾರೆ. ಬೆಂಕಿ ಹಾಗೂ ಹೊಗೆ ಕಾರಣ ಸ್ಕೂಟರ್‌ಗಳನ್ನು ತೆರವು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಕೆಲ ಸ್ಕೂಟರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ.
Ather Energy Updates: ಮಾರ್ಚ್ ತಿಂಗಳಲ್ಲಿ ಶೇ.125ರಷ್ಟು ಮಾರಾಟ ದಾಖಲಿಸಿದೆ ಏಥರ್ ಎನರ್ಜಿ
ಈ ಕುರಿತು ಟ್ವೀಟ್ ಮಾಡಿರುವ ಎದರ್, ಚೆನ್ನೈನಲ್ಲಿನ ಎಕ್ಸ್‌ಪೀರಿಯನ್ಸ್ ಕೇಂದ್ರದಲ್ಲಿ ಸಣ್ಣ ಬೆಂಕಿ ಕಾಣಿಸಿಕೊಂಡಿದೆ. ಇದು ಕಚೇರಿ ಹಾಗೂ ಸ್ಕೂಟರ್ ಮೇಲೂ ಪರಿಣಾಮ ಬೀರಿದೆ. ಅದೃಷ್ಠವಶಾತ್ ಎಲ್ಲಾ ಉದ್ಯೋಗಿಗಳು ಸುರಕ್ಷಿತವಾಗಿದ್ದಾರೆ. ಶೀಘ್ರದಲ್ಲೇ ಎಕ್ಸ್‌ಪೀರಿಯನ್ಸ್ ಕೇಂದ್ರ ಕಾರ್ಯಾರಂಭಗೊಳ್ಳಲಿದೆ ಎಂದು ಎದರ್ ಹೇಳಿದೆ.
ಇತ್ತೀಚೆಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನಗಳು ಹೆಚ್ಚಾಗಿದೆ. ಇದು ಗ್ರಾಹಕರ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಕಚೇರಿಯಲ್ಲೇ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ಮತ್ತಷ್ಟು ಹೆಚ್ಚಿಸಿದೆ. ಈ ಘಟನೆಗೆ ಕಾರಣವೇನು? ಸ್ಕೂಟರ್ ಬ್ಯಾಟರಿಗಳೇ? ಅಥವಾ ಕಚೇರಿಯಲ್ಲಿನ ಕಾರಣಗಳೇ ಅನ್ನೋದು ಇನ್ನು ಬಹಿರಂಗವಾಗಿಲ್ಲ.
ಚಲಿಸುತ್ತಿದ್ದ ಎಲೆಕ್ಟ್ರಿಕ್ ಬೈಕ್‌ಗೆ ಬೆಂಕಿ: ಅವಘಡದಿಂದ ಪಾರಾದ ಮಾಲಿಕ
ಎಲೆಕ್ಟ್ರಿಕ್ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುವ ಘಟನೆಗಳು ಮುಂದುವರಿದಿವೆ. ತಮಿಳುನಾಡಿನ ಗಡಿ ಭಾಗದಲ್ಲಿ ಶನಿವಾರ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸವಾರ ಸ್ವಲ್ಪದರಲ್ಲೇ ಪಾರಾದ ಘಟನೆ ವರದಿಯಾಗಿದೆ.
Electric Scooter ಏಥರ್ ಎನರ್ಜಿಯಲ್ಲಿ ಹೀರೋ ಮೋಟೋಕಾರ್ಪ್ ಹೂಡಿಕೆ, ಷೇರು ಬೆಲೆ ಶೇ.5ರಷ್ಟು ಏರಿಕೆ!
ಬೆಂಗಳೂರು ನಗರದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸೂಪರ್‌ವೈಸರ್ ಆಗಿರುವ, ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ನಿವಾಸಿ ಸತೀಶ್ ಕುಮಾರ್ ಸ್ವಲ್ಪದರಲ್ಲೇ ಪಾರಾದ ಸವಾರ. ಅವರು ತಮಿಳುನಾಡಿನ ಜೂಜುವಾಡಿಯಲ್ಲಿ ಬರುತ್ತಿದ್ದಾಗ ಏಕಾಏಕಿ ಎಲೆಕ್ಟ್ರಿಕ್ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಬೈಕ್‌ನಿಂದ ಜಿಗಿದು ತಪ್ಪಿಸಿಕೊಂಡಿದ್ದಾರೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಆದರೂ ವಾಹನದ ಹಿಂಭಾಗ ಪೂರ್ಣವಾಗಿ ಸುಟ್ಟು ಹೋಗಿದೆ. ಎಲೆಕ್ಟ್ರಿಕ್ ಶಾರ್ಚ್ ಸಕ್ರ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಪೋಟ: ಒಬ್ಬನ ಸಾವು
ಹೊಸ ಎಲೆಕ್ಟ್ರಿಕ್ ಬೈಕ್‌ನ ಬ್ಯಾಟರಿ ಚಾಜ್‌ರ್‍ಗೆ ಇಟ್ಟಿದ್ದ ವೇಳೆ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶ ವಿಜಯವಾಡದಲ್ಲಿ ನಡೆದಿದೆ. ಶಿವಕುಮಾರ್ (40) ಸ್ಫೋಟಕ್ಕೆ ಬಲಿಯಾಗಿದ್ದು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಗಾಯಗಳಾಗಿದೆ. ಇತ್ತೀಚೆಗೆ ತೆಲಂಗಾಣದ ನಿಜಾಮಾಬಾದ್‌ನಲ್ಲೂ ಬೈಕ್‌ನ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿ ಮೃತಪಟ್ಟಿದ್ದ. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಕೂಡ ಇದೇ ರೀತಿಯ ಘಟನೆಗಳು ವರದಿಯಾಗಿದ್ದವು.
ನಿಂಬೆಗೊಂದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಸ್ಫೋಟ
ರಾತ್ರಿ ಎಂದಿನಂತೆ ಅವರು ತಮ್ಮ ಅಡಕೆ ಮನೆಯಲ್ಲಿ ಬೈಕ್ ಅನ್ನು ಚಾರ್ಜರ್‌ಗೆ ಅಳವಡಿಸಿ ನಿಲ್ಲಿಸಿದ್ದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಎಲೆಕ್ಟ್ರಿನಿಕ್ ಬೈಕ್ ಸ್ಫೋಟಗೊಂಡಿದೆ. ಇದರಿಂದಾಗಿ ಪಕ್ಕದ ಮಂಚದ ಮೇಲೆ ಮಲಗಿದ್ದ ಮಲ್ಲಿಕಾರ್ಜುನ್ ಎಚ್ಚರವಾಗಿದ್ದಾರೆ. ಕ್ಷಣಾರ್ಧದಲ್ಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಪಕ್ಕದಲ್ಲಿದ್ದ ಕಬ್ಬಿಣ ಮಂಚದ ಮೇಲಿದ್ದ ಹಾಸಿಗೆ ಬೆಂಕಿಗೆ ಆಹುತಿಯಾಗಿದೆ.