ಶನಿವಾರ ಧಾರವಾಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ, SSLC ಪರೀಕ್ಷೆ ಇರುತ್ತೆ

Published : Mar 22, 2019, 06:15 PM ISTUpdated : Mar 22, 2019, 06:26 PM IST
ಶನಿವಾರ ಧಾರವಾಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ, SSLC ಪರೀಕ್ಷೆ ಇರುತ್ತೆ

ಸಾರಾಂಶ

ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಹೃದಯಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ ಜೊತೆಗೆ ಶನಿವಾರ ಧಾರವಾಡ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಧಾರವಾಡ, (ಮಾ.22): ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಹೃದಯಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಶುಕ್ರವಾರದಿಂದ ಆರಂಭವಾಗಿ ಮಾ.24ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ. ಶಿವಕುಮಾರ್​ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ.

ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ತೀವ್ರ ಹೃದಯಾಘಾತದಿಂದ ನಿಧನ

ಈ ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಇಳಿಸಬೇಕು. ಎಲ್ಲ ಅಧಿಕೃತ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಬೇಕು. ಇನ್ನು ನಾಳೆ [ಮಾರ್ಚ್ 22] ಧಾರವಾಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.  

ಆದ್ರೆ ಎಸ್​​ಎಸ್​​ಎಲ್​​ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳು, ಸಿಬ್ಬಂದಿಗಳ ಹೊರತುಪಡಿಸಿ ಜಿಲ್ಲೆಯಲ್ಲಿ ರಜೆ ಪ್ರಕಟಿಸಲಾಗಿದೆ. ಎಸ್ ಎಸ್ ಎಲ್ ಎಸಿ ಪರೀಕ್ಷೆಗಳು ಅಬಾಧಿತವಾಗಿ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ನಾಳೆ [ಶನಿವಾರ] ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಶಿವಳ್ಳಿ ಕುಟುಂಬದ ಮೂಲಗಳು ತಿಳಿಸಿವೆ.

PREV
click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ