ವರುಣನ ಆರ್ಭಟಕ್ಕೆ ತುಂಬಿ ಹರಿಯುತ್ತಿರುವ ಬೆಣ್ಣೆ ಹಳ್ಳ: ಮತ್ತೆ ನೆರೆ ಭೀತಿ

By Web DeskFirst Published Oct 9, 2019, 12:39 PM IST
Highlights

ನವಲಗುಂದ, ಕುಂದಗೋಳ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ| ಹಳ್ಳಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಅಕ್ಕಪಕ್ಕದ ಜಮೀನುಗಳಿಗೆಲ್ಲ ನೀರು ನುಗ್ಗಿದೆ| ಇದರಿಂದ ರೈತಾಪಿ ವರ್ಗ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ| 

ಹುಬ್ಬಳ್ಳಿ:(9): ಸೋಮವಾರ ರಾತ್ರಿ ನವಲಗುಂದ, ಕುಂದಗೋಳ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಅಕ್ಕಪಕ್ಕದ ಜಮೀನುಗಳಿಗೆಲ್ಲ ನೀರು ನುಗ್ಗಿದೆ. ಇದರಿಂದ ರೈತಾಪಿ ವರ್ಗ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಅಕ್ಕಪಕ್ಕದ ಗ್ರಾಮಗಳಲ್ಲಿ ‌ಮತ್ತೆ ನೆರೆ ಭೀತಿ ಉಂಟಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಹಾಗೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ  ವರುಣ ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿನ ಹಳ್ಳ , ಕೊಳ್ಳಗಳು ತುಂಬಿ ಹರಿಯುತ್ತಿವೆ.ಕಳೆದ ತಿಂಗಳು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು, ಇದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಮನೆ, ಜಮೀನುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು.  
 

click me!