ಹುಬ್ಬಳ್ಳಿ-ಧಾರವಾಡ ಜನತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಇನ್ನು ಮುಂದೆ ಹುಬ್ಬಳ್ಳಿಯಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರತಿದಿನವೂ ವಿಮಾನ ಹಾರಲಿದೆ.
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜನತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಇನ್ನು ಮುಂದೆ ಹುಬ್ಬಳ್ಳಿಯಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರತಿದಿನವೂ ವಿಮಾನ ಹಾರಲಿದೆ. ಹುಬ್ಬಳ್ಳಿ ಧಾರವಾಡ ಜನತೆಗೆ ದೆಹಲಿಯನ್ನು ಹತ್ತಿರ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹುಬ್ಬಳ್ಳಿಯಿಂದ ದೆಹಲಿಗೆ ನೇರವಾಗಿ ಅಗತ್ಯ ಸಾರಿಗೆ ಸಂಪರ್ಕ ಕಲ್ಪಿಸುವಲ್ಲಿ ಪ್ರಹ್ಲಾದ್ ಜೋಶಿಯವರು ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ.
ಹುಬ್ಬಳ್ಳಿಯಿಂದ ದೆಹಲಿಗೆ (Hubli to Delhi) ನೇರವಾಗಿ ರೈಲು ಸಂಚಾರ ಆರಂಭವಾದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯಿಂದ ದೆಹಲಿಗೆ (National Capital) ನೇರವಾಗಿ ಪ್ರತಿನಿತ್ಯ ವಿಮಾನ ಸೇವೆಯನ್ನೂ ಪ್ರಹ್ಲಾದ್ ಜೋಶಿಯವರು (Prahlad Joshi) ಸಾಧ್ಯವಾಗಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿನಿತ್ಯ ವಿಮಾನ ಸೇವೆ ಕಲ್ಪಿಸಲು ಇಂಡಿಗೋ ಏರ್ ಲೈನ್ಸ್ (Indigo Airlines) ಜೊತೆ ಸಚಿವ ಜೋಶಿ ಮಾತುಕತೆ ನಡೆಸಿದ್ದು ಒಪ್ಪಿಗೆ ಕೂಡ ಸಿಕ್ಕಿದೆ. ಇದರಿಂದಾಗಿ ಇನ್ಮುಂದೆ ಪ್ರತಿನಿತ್ಯ ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ಏರ್ ಲೈನ್ಸ್ ನಲ್ಲಿ ಹುಬ್ಳಿ ಮಂದಿ ಪ್ರಯಾಣ ಬೆಳೆಸ್ಬಹುದು.
Good news for all Hubballi-Dharwad citizens, as per my discussions and request made to authorities of regarding daily Hbx-Del Direct flight they are starting service from 14th Nov 22, the booking slots are open now.
I thank the management of pic.twitter.com/tezGf1Bwmt
ನಿನ್ನೆಯಷ್ಟೇ ಹುಬ್ಬಳ್ಳಿಯಿಂದ ದೆಹಲಿಗೆ ಸಂಚರಿಸುವ ನಿಜಾಮುದ್ದೀನ್ ಎಕ್ಸ್‌ಪ್ರೆಸ್ (Nijamuddin Express Train) ರೈಲು ಸೇವೆಗೆ ಚಾಲನೆ ನೀಡಲಾಗಿತ್ತು. ಈ ಹಿಂದೆ ವಾರಕ್ಕೆ ಒಂದು ದಿನ ಮಾತ್ರ ದೆಹಲಿಗೆ ಈ ನಿಜಾಮುದ್ದೀನ್ ಲಿಂಕ್ ಟ್ರೇನ್ ((Nijamuddin Linked train) ವ್ಯವಸ್ಥೆಯಿತ್ತು. ಅದರ ಬದಲಿಗೆ ನಿನ್ನೆ ಹುಬ್ಬಳ್ಳಿಯಿಂದ ನೇರವಾಗಿ ದೆಹಲಿ ತಲುಪುವ ನಿಜಾಮುದ್ದೀನ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ.
ಹಳೆ ರೈಲಿಗೆ ಒಡೆಯರ್ ಹೆಸರಿಟ್ಟು ಗೌರವಕ್ಕೆ ಧಕ್ಕೆ ತರಬೇಡಿ: ಖಾದರ್
ಹುಬ್ಬಳ್ಳಿಯಿಂದ ದೆಹಲಿಗೆ ನೇರ ರೈಲು ವ್ಯವಸ್ಥೆ ಕಲ್ಪಿಸಿದ ಬೆನ್ನಲ್ಲೇ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿ ನಿತ್ಯ ಇಂಡಿಗೋ ಏರ್ ಲೈನ್ಸ್ ಸಂಚಾರದ ಸಿಹಿ ಸುದ್ದಿಯನ್ನ ಪ್ರಹ್ಲಾದ್ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣಗಳ (Social Media)ಮೂಲಕ ಹಂಚಿಕೊಂಡಿದ್ದಾರೆ. ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಜನತೆಯ ಬಹುದಿನಗಳ ಬೇಡಿಕೆ ಈಡೇರಿದೆ. ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಒದಗಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂಡಿಗೋ ಅಧಿಕಾರಿಗಳಿಗೆ ಕೋರಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಇಂಡಿಗೋ ಏರ್ ಲೈನ್ಸ್ ಅಧಿಕಾರಿಗಳು, ನವೆಂಬರ್ 14 ರಿಂದ ಪ್ರತಿದಿನ ವಿಮಾನ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಟಿಕೆಟ್ ಬುಕ್ಕಿಂಗ್ (Ticket Booking) ಕೂಡ ಈಗಾಗಲೇ ಪ್ರಾರಂಭವಾಗಿದೆ.
ಸೇವೆ ಪ್ರಾರಂಭಿಸಿದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂಡಿಗೋ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಪ್ರತಿ ದಿನ ದೆಹಲಿಯಿಂದ ಬೆಳಗ್ಗೆ 10 ಗಂಟೆಗೆ ವಿಮಾನ ಸೇವೆಯ ವೇಳಾಪಟ್ಟಿ ನಿಗದಿಪಡಿಸಲಾಗಿದ್ದು, 12.45 ಕ್ಕೆ ಹುಬ್ಬಳ್ಳಿ ತಲುಪಲಿದೆ. ಇನ್ನು ಹುಬ್ಬಳ್ಳಿಯಿಂದ ಮಧ್ಯಾಹ್ನ 1.15 ಕ್ಕೆ ಹೊರಡಲಿರುವ ಇಂಡಿಗೋ ಏರ್ ಲೈನ್ಸ್ ವಿಮಾನ 3.45 ಕ್ಕೆ ದೆಹಲಿ ತಲುಪಲಿದೆ.
ಹುಬ್ಬಳ್ಳಿ-ದೆಹಲಿ ವಿಮಾನ ಆರಂಭವಾದರೆ ಉದ್ಯಮಕ್ಕೆ ಅನುಕೂಲ
ವೇಳಾಪಟ್ಟಿ :
ದೆಹಲಿ - ಹುಬ್ಬಳ್ಳಿ 10:00 – 12:45
ಹುಬ್ಬಳ್ಳಿ - ದೆಹಲಿ 13:15 – 15:45