ಮನೆಯವರು ತಮ್ಮ ಪ್ರೀತಿಯನ್ನು ಒಪ್ಪಲಿಲ್ಲ ಎಂದು ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಯುವತಿ ಮೃತಪಟ್ಟಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ.
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಎ.5): ರಾಜ್ಯದಲ್ಲಿ ಜಾತಿಯತೇಯ ಕೂಗು ಅಲ್ಲಲ್ಲಿ ಕೇಳಿ ಬರುತ್ತಿರುವ ಇಂತಹ ಸಮಯದಲ್ಲಿ ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದ ಹುಡುಗಿಯೋರ್ವಳು ತನ್ನ ಮದುವೆಯನ್ನು ಬೇರೆಯವರ ಜೊತೆ ಮಾಡುತ್ತಾರೆ ಎಂಬ ಕಾರಣಕ್ಕೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನವಲಗುಂದ ಪಟ್ಟಣದಲ್ಲಿ ನಡೆದಿದೆ.
ಪ್ರೇಮಿಗಳಿಬ್ಬರು ವಿಷ ಕುಡಿದಿರುವ ವಿಷಯ ತಿಳಿದ ತಕ್ಷಣ ಅವರನ್ನು ಸಮೀಪದ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಲಾಯ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೊದಲು ಸಾವಿಗೀಡಾಗಿದ್ದು, ಯುವಕನ ಸ್ಥಿತಿಯೂ ಗಂಭೀರವಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ.
Chikkamagaluru ಹಣಕಾಸಿನ ವಿಚಾರಕ್ಕೆ ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ
ಮೂಲತಃ ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಸಾವಿತ್ರಿ ಮುತ್ತಪ್ಪ ನರಗುಂದ ಹಾಗೂ ಮಲ್ಲಪ್ಪ ದುರ್ಗಪ್ಪ ಮಾದರ ವಿಷ ಸೇವಿಸಿದ್ದ ಪ್ರೇಮಿಗಳು. ಇಬ್ಬರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‌ಗೆ ರವಾನೆ ಮಾಡಲಾಗಿತ್ತು.
ಕಿಮ್ಸನಲ್ಲಿ ಚಿಕಿತ್ಸೆ ಫಲಕಾರಿಯಾಗದೇ 20 ವಯಸ್ಸಿನ ಸಾವಿತ್ರಿ ಸಾವನ್ನಪ್ಪಿದ್ರೆ 10 ಘಂಟೆ ಬಳಿಕ ಮಲ್ಲಪ್ಪನೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕೆಲವು ದಿನಗಳ ಹಿಂದೆ ಸಾವಿತ್ರಿಗೆ ಬೇರೆ ಯುವಕನ ಜೊತೆ ಮದುವೆ ಒಪ್ಪಂದ ಮಾಡಿದ್ದರು. ಇದನ್ನ ಒಪ್ಪಿಕೊಳ್ಳದೇ ಪ್ರೇಮಿಗಳು ಪ್ರಾಣತ್ಯಾಗ ಮಾಡಲು ನಿರ್ಧರಿಸಿ, ಇಂತಹ ತೀರ್ಮಾನ ಮಾಡಿದ್ದಾರೆಂದು ಹೇಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
VIMS Bellary Recruitment 2022: ಉಪನ್ಯಾಸಕ ಹುದ್ದೆಗಳಿಗೆ ವಿಮ್ಸ್ ನೇಮಕಾತಿ