ಧಾರವಾಡದಲ್ಲಿ ಭೀಕರ ದುರಂತ: ಕುಸಿದ ನಿರ್ಮಾಣ ಹಂತದ ಕಟ್ಟಡ

Published : Mar 19, 2019, 04:09 PM ISTUpdated : Mar 19, 2019, 07:15 PM IST
ಧಾರವಾಡದಲ್ಲಿ ಭೀಕರ  ದುರಂತ: ಕುಸಿದ ನಿರ್ಮಾಣ ಹಂತದ ಕಟ್ಟಡ

ಸಾರಾಂಶ

ಧಾರವಾಡದ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ| ಕಟ್ಟಡದ ಅವಶೇಷಗಳಡಿಯಲ್ಲಿ ಬಹಳಷ್ಟು ಕಾರ್ಮಿಕರು ಸಿಲುಕಿರುವ ಶಂಕೆ |

ಧಾರವಾಡ, (ಮಾ.19): ಧಾರವಾಡದ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದುಬಿದ್ದಿದೆ.ಪರಿಣಾಮ ಕಟ್ಟಡದ ಅವಶೇಷಗಳಡಿಯಲ್ಲಿ 100ಕ್ಕೂ ಹೆಚ್ಚು ಜನರು ಸಿಲುಕ್ಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯ ನಡೆದಿದೆ.

"

ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ಸಂಬಂಧಿ ಸಂತ್ರಿ ಎನ್ನುವರಿಗೆ ಸೇರಿದ ಕಟ್ಟಡ ಎಂದು ತಿಳಿದುಬಂದಿದೆ. ಧಾರವಾಡದ ಹೊಸ ಬಸ್ ಸ್ಟ್ಯಾಂಡ್ ಸಮೀಪ  ಕುಮಾರೇಶ್ವರನಗರದಲ್ಲಿ 2 ವರ್ಷಗಳಿಂದ ಈ ಬೃಹತ್ ಕಾಂಪ್ಲೆಕ್ಸ್ ಕಟ್ಟಡ ನಿರ್ಮಾಣವಾಗುತ್ತಿತ್ತು. 

ಸುಮಾರು 4 ಸಾವಿರ ಚದರ ಅಡಿ ಪ್ರದೇಶದಲ್ಲಿ ನಿರ್ಮಿಸುತ್ತಿದ್ದ ಕಟ್ಟಡ ಇಂದು (ಮಂಗಳವಾರ) ಏಕಾಏಕಿ ಕುಸಿದುಬಿದ್ದಿದೆ. 

ನಾಲ್ಕು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡದ ಗ್ರೌಂಡ್ ಹಾಗೂ ಒಂದು, ಎರಡರಲ್ಲಿ ಮಳಿಗೆಗಳು ಕಾರ್ಯಾರಂಭ ಮಾಡಿದ್ದವು. 

ಗ್ರೌಂಡ್ ಹಾಗೂ ಒಂದು, ಎರಡರಲ್ಲಿ ಅಂತಿಸ್ತಿನಲ್ಲಿ  ಹೋಟೆಲ್, ಪರ್ನಿಚರ್ ಅಂಗಡಿ, ಕಟಿಂಗ್ ಸಲೂನ್, ಮೆಡಿಕಲ್ ಶಾಪ್ ಸೇರಿದಂತೆ ಇತರೆ ಅಂಗಡಿಗಳು ಇದ್ದವು.

ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

PREV
click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ