ಡಿಸಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆಯಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ| ಧಾರವಾಡದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಪ್ರಸ್ತಾವನೆ ಕಳುಹಿಸಲು ಪ್ರವಾಸೋದ್ಯಮ ಇಲಾಖೆಗೆ ಸೂಚನೆ ನೀಡಿದ ಸಚಿವ ಸಿ.ಟಿ. ರವಿ| ಜಿಲ್ಲೆಯ ಜನಪ್ರತಿನಿಧಿಗಳು, ತಜ್ಞರು, ಸಾರ್ವಜನಿಕರನ್ನೊಳಗೊಂಡ ಜಿಲ್ಲಾ ಪ್ರವಾಸೋದ್ಯಮ ಸಲಹಾ ಸಮಿತಿಯನ್ನು ಪುನರ್ ರಚಿಸಬೇಕು|
ಧಾರವಾಡ[ಅ. 24]: ಸಾಂಸ್ಕೃತಿಕವಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಧಾರವಾಡದಲ್ಲಿ ಸಾಕಷ್ಟು ಅವಕಾಶವಿದ್ದು ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಪ್ರಸ್ತಾವನೆ ಕಳುಹಿಸಲು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಇಲಾಖೆ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ 19 ಜಿಲ್ಲೆಗಳ ಪ್ರವಾಸ ನಡೆಸಿದ್ದು ಮಾಹಿತಿ ಸಂಗ್ರಹಿಸಿ ಸುಸ್ಥಿರ ಪ್ರವಾಸೋದ್ಯಮ ನೀತಿ ರೂಪಿಸಲು ಚಿಂತಿಸಲಾಗುತ್ತಿದೆ ಎಂದರು. ರಾಜ್ಯ ಪ್ರವಾಸೋದ್ಯಮ ಪಟ್ಟಿಯಲ್ಲಿ ಧಾರವಾಡ ಜಿಲ್ಲೆಯ 4 ಪ್ರವಾಸಿ ಸ್ಥಳಗಳಿದ್ದು, 2 ಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರೊಂದಿಗೆ ಚರ್ಚಿಸಿ, ಜಿಲ್ಲೆಯ ಜನಪ್ರತಿನಿಧಿಗಳ, ಅನುಭವಿಗಳ ಸಭೆ ಜರುಗಿಸಿ ಹೆಚ್ಚಿನ ಸ್ಥಳಗಳನ್ನು ರಾಜ್ಯ ಪ್ರವಾಸೋದ್ಯಮ ಪಟ್ಟಿಗೆ ಸೇರಿಸಲು ಕ್ರಮವಹಿಸಬೇಕು ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಜಿಲ್ಲೆಯ ಜನಪ್ರತಿನಿಧಿಗಳು, ತಜ್ಞರು, ಸಾರ್ವಜನಿಕರನ್ನೊಳಗೊಂಡ ಜಿಲ್ಲಾ ಪ್ರವಾಸೋದ್ಯಮ ಸಲಹಾ ಸಮಿತಿಯನ್ನು ಪುನರ್ ರಚಿಸಬೇಕು. ಜಿಲ್ಲೆಯ ಸಾಂಸ್ಕೃತಿಕ ಹಿನ್ನೆಲೆ ಬಿಂಬಿಸುವ 2020ರ ಕ್ಯಾಲೆಂಡರ್‌ನ್ನು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ರೂಪಿಸಲು ಸಚಿವರು ಸೂಚಿಸಿದರು.
undefined
ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಪ್ರವಾಸೋದ್ಯಮ ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲೆಯ 62 ಪ್ರಮುಖ ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಪ್ರವಾಸ ತಾಣ, ಕಲೆ, ಸಾಹಿತ್ಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಬಿಂಬಿಸುವ ಕಾಪಿಟೇಬಲ್ ಪುಸ್ತಕವನ್ನು ಬರುವ ನವೆಂಬರ್‌ನಲ್ಲಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ನೀಡಿದರು.
ಆಗ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಜಿಲ್ಲೆಯ ಅನೇಕ ಪ್ರವಾಸಿ ತಾಣಗಳಿಗೆ ಹೆಚ್ಚಿನ ಮೂಲಸೌಕರ್ಯಗಳ ಅಗತ್ಯವಿದೆ. ಥ್ಯಾಕರೆ ಸಮಾಧಿ, ಕೆಲಗೇರಿ ಕೆರೆ, ಧಾರವಾಡ ಕೋಟೆ, ಶಾಲ್ಮಲಾ ನದಿ ಉಗಮ ಸ್ಥಾನ ಸೇರಿದಂತೆ ಪ್ರಮುಖ ಸ್ಥಳಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯಾಗಬೇಕಿದೆ. ಅಲ್ಲದೇ, ಶಾಸ್ತ್ರೀಯ ಸಂಗೀತದಾರರ ತವರೂರಾಗಿದ್ದು ರಾಷ್ಟ್ರೀಯಮಟ್ಟದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ ನಡೆಯಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಜಿಲ್ಲಾ ಉತ್ಸವದ ಸಂದರ್ಭದಲ್ಲಿಯೇ ಈ ಸಂಗೀತೋತ್ಸವ ಮಾಡಬಹುದು ಎಂದು ಸಚಿವ ಸಿ.ಟಿ. ರವಿ ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದರು.
ಜಿಪಂ ಸಿಇಒ ಡಾ. ಬಿ.ಸಿ. ಸತೀಶ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ರಾಜ್ಯ ಪತ್ರಗಾರ ಇಲಾಖೆಯ ನಿರ್ದೇಶಕ ಸಿ. ಗಂಗಾಧರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರಿ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.