ಹುಬ್ಬಳ್ಳಿ: ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

By Web DeskFirst Published Oct 28, 2019, 1:58 PM IST
Highlights

ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ  ಪ್ರತಿಭಟನೆ| ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಕಪ್ಪುಪಟ್ಟಿ ಧರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು| ಪ್ರವಾಹ ಪೀಡಿತ ಪ್ರದೇಶಗಳಿಗೆ ಸಮರ್ಪಕ ಪರಿಹಾರ ಒದಗಿಸಿಲ್ಲ| ಕೂಡಲೇ ಕೇಂದ್ರ ಸರ್ಕಾರ 50 ಸಾವಿರ ಕೋಟಿ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ|

ಹುಬ್ಬಳ್ಳಿ(ಅ.28): ನೆರೆ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಕಪ್ಪುಪಟ್ಟಿ ಧರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರವಾಹ ಪೀಡಿತ ಪ್ರದೇಶಗಳಿಗೆ ಸಮರ್ಪಕ ಪರಿಹಾರ ಒದಗಿಸಿಲ್ಲ. ಕೂಡಲೇ ಕೇಂದ್ರ ಸರ್ಕಾರ 50 ಸಾವಿರ ಕೋಟಿ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಪ್ರತಿಭಟನಾಕಾರರು ಕಪ್ಪುಪಟ್ಟಿ ಧರಿಸಿ ರಸ್ತೆ ತಡೆ ನಡೆಸಿ ಸಮರ್ಪಕ ಪರಿಹಾರ ನೀಡದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೊಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಷವನ್ನು ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನಾ ನಿರತ ವಾಟಾಳ್ ನಾಗರಾಜ್ ಹಾಗೂ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 
 

click me!