'ಬಿಎಸ್‌ವೈ-ಕಟೀಲ್‌ ನಾಯಕತ್ವದಡಿ ನಾವೆಲ್ಲರೂ ಕಾರ್ಯ ನಿರ್ವಹಿಸಲಿದ್ದೇವೆ'

Published : Oct 17, 2019, 02:28 PM IST
'ಬಿಎಸ್‌ವೈ-ಕಟೀಲ್‌ ನಾಯಕತ್ವದಡಿ ನಾವೆಲ್ಲರೂ ಕಾರ್ಯ ನಿರ್ವಹಿಸಲಿದ್ದೇವೆ'

ಸಾರಾಂಶ

ಮೋದಿ ಹಾಗೂ ಶಾ ಮಾಡಲ್ ಹೇಗಿದೆಯೋ, ಹಾಗೆಯೇ ರಾಜ್ಯದಲ್ಲಿ ನಳೀನ್ ಕುಮಾರ್ ಕಟೀಲ್ ಮತ್ತು ಯಡಿಯೂರಪ್ಪ ಮಾಡಲ್ ಇದೆ| ಅವರ ಕ್ಯಾಪ್ಟನ್‌ಶಿಪ್ ನಂತೆಯೇ ನಾವೆಲ್ಲರೂ ನಮ್ಮ ಕಾರ್ಯ ನಿರ್ವಹಿಸಲಿದ್ದೇವೆ ಎಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ| ವಿಜಯಪುರ ನಗರ ಕ್ಷೇತ್ರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೋಟಿಸ್ ಗೆ ಉತ್ತರ ನೀಡಬೇಕು| ಉತ್ತರ ನೀಡದಿದ್ದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ| 

ಹುಬ್ಬಳ್ಳಿ(ಅ.17): ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮಾಡಲ್ ಹೇಗಿದೆಯೋ, ಹಾಗೆಯೇ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಲ್ ಇದೆ. ಅವರ ಕ್ಯಾಪ್ಟನ್‌ಶಿಪ್ ನಂತೆಯೇ ನಾವೆಲ್ಲರೂ ನಮ್ಮ ಕಾರ್ಯ ನಿರ್ವಹಿಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭಾನುಪ್ರಕಾಶ ಅವರು ಹೇಳಿದ್ದಾರೆ. 

ಗುರುವಾರ ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ನಗರ ಕ್ಷೇತ್ರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೋಟಿಸ್ ಗೆ ಉತ್ತರ ನೀಡಬೇಕು. ಉತ್ತರ ನೀಡದಿದ್ದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.ಅವರು ನೋಟೀಸ್‌ಗೆ ಉತ್ತರ ನೀಡುತ್ತಾರೆ ಎಂಬ ನಿರೀಕ್ಷೆ ಇದೆ. ಒಂದು ವೇಳೆ ಉತ್ತರಿಸದಿದ್ದಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚಿಂತನೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಡಿಸೆಂಬರ್‌ ವೇಳೆಗೆ ಸಿಎಂ ಪಟ್ಟ ಬದಲಾವಣೆ ಆಗಲಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಈ ರೀತಿ ಏನೂ ಆಗುವುದಿಲ್ಲ. ಅದೆಲ್ಲ ಊಹಾಪೋಹ ಅಷ್ಟೇ ಎಂದು ಹೇಳಿದ್ದಾರೆ. 

PREV
click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ