ಶಿವಮೊಗ್ಗ: ರಿಪ್ಪನ್‌ಪೇಟೆ ಯುವತಿ ಅನುಮಾನಾಸ್ಪದ ಸಾವು

By Web Desk  |  First Published Sep 25, 2019, 5:36 PM IST

ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆ ಸಮೀಪ ನಡೆದಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...


ಶಿವಮೊಗ್ಗ[ಸೆ.25]: ನಗರದ ರಿಪ್ಪನ್ ಪೇಟೆ ಸಮೀಪದ ಮಾದಾಪುರ ಗ್ರಾಮದಲ್ಲಿ 17 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.

ಶಿವಮೊಗ್ಗ: ಪರವಾನಗಿ ನೋಂದಣಿ ಮಾಡ್ಸಿ ಅಂದ್ರೆ ಕ್ಯಾರೇ ಅಂತಿಲ್ಲ ವ್ಯಾಪಾರಿಗಳು..!

Tap to resize

Latest Videos

ಹೊಸನಗರ ತಾಲೂಕು ರಿಪ್ಪನ್ ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಪೂಜಾ ಮೃತದೇಹ ಇಂದು ಮುಂಜಾನೆ ಆಕೆಯ ಮನೆಯ ಎದುರುಗಡೆಯ ಬಾವಿಯಲ್ಲಿ ಸಿಕ್ಕಿದೆ. ಪೂಜಾ ರಿಪ್ಪನ್ ಪೇಟೆ ಪದವಿ ಪೂರ್ವ ಕಾಲೇಜಿನಲ್ಲಿ ಸೈನ್ಸ್ ವ್ಯಾಸಂಗ ಮಾಡುತ್ತಿದ್ದಳು.  ಮಾದಾಪುರದ ಈಶ್ವರ ಶೇಟ್ ಎಂಬುವರ ಪುತ್ರಿ ಪೂಜಾ(17) ಮೃತ ದುರ್ದೈವಿ. ನಿನ್ನೆಯಷ್ಟೇ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಇಂದು ಮುಂಜಾನೆ ಪೂಜಾ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಜಿಲ್ಲಾ ಸುದ್ದಿಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ..

ಯಾರೋ ಪೂಜಾಳನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವುದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ. ಇದೀಗ ರಿಪ್ಪನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ತನಿಖೆಯ ಬಳಿಕವಷ್ಟೇ ಸತ್ಯಾಸತ್ಯತೆ ಬೆಳಕಿಗೆ ಬರಬೇಕಾಗಿದೆ. 

ಶಿವಮೊಗ್ಗ: ರಿಪ್ಪನ್‌ಪೇಟೆ ಗಣೇಶ ವಿಸರ್ಜನೆ ವೇಳೆ ಇಬ್ಬರು ಯುವಕರಿಗೆ ಚಾಕು ಇರಿತ..!

click me!