82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ

Published : Nov 16, 2016, 03:51 PM ISTUpdated : Apr 11, 2018, 12:40 PM IST
82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ

ಸಾರಾಂಶ

ಇಲ್ಲಿನ ರಾಯಚೂರು ಕೃಷಿ ವಿವಿ ಆವರಣದಲ್ಲಿ ಡಿ.2,3 ಮತ್ತು 4 ರಂದು ನಡೆಯಲಿರುವ ೮೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ವೇದಿಕೆ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ಬುಧವಾರ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿರುವ 82 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ರಾಯಚೂರು (ನ.16): ಇಲ್ಲಿನ ರಾಯಚೂರು ಕೃಷಿ ವಿವಿ ಆವರಣದಲ್ಲಿ ಡಿ.2,3 ಮತ್ತು 4 ರಂದು ನಡೆಯಲಿರುವ ೮೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ವೇದಿಕೆ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ಬುಧವಾರ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿರುವ 82 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

35 ರಿಂದ 40 ಸಾವಿರ ಜನ ಪ್ರತಿದಿನ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.17 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದರು. ಈಗಾಗಲೇ ಸರ್ಕಾರದಿಂದ ಸಮ್ಮೇಳನಕ್ಕಾಗಿ ರೂ.2 ಕೋಟಿ ಬಿಡುಗಡೆಯಾಗಿದೆ. ಶೀಘ್ರದಲ್ಲಿ ಇನ್ನೂ ರೂ.2 ಕೋಟಿ ಅನುದಾನ ಬಿಡುಗಡೆಯಾಗಲಿದೆ. ಸುಮಾರು ರೂ.2  ಕೋಟಿಗಳಷ್ಟು ದೇಣಿಗೆ ಸಂಗ್ರಹಿಸಲಾಗಿದೆ. ವೇದಿಕೆ ನಿರ್ಮಾಣ, ಸ್ವಾಗತ ಬ್ಯಾನರ್‌ಗಳು ಸೇರಿದಂತೆ ಒಟ್ಟು ರೂ.1.90 ಕೋಟಿ ವೆಚ್ಚದಲ್ಲಿ ಮಾಡಲು ವಹಿಸಿಕೊಡಲಾಗಿದೆ ಎಂದು ವಿವರಿಸಿದರು.

ಸಮ್ಮೇಳನಕ್ಕಾಗಿ ಆಗಮಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಪುಸ್ತಕಗಳ ಮಾರಾಟ ಮಳಿಗೆ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಮಳಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಸುಮಾರು 6 ಸಾವಿರ ಪ್ರತಿನಿಧಿಗಳ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಅಸ್ಕಿಹಾಳ ಹತ್ತಿರ 28 ಎಕರೆ ಪ್ರದೇಶದಲ್ಲಿ ದ್ವಿಚಕ್ರವಾಹನ, ಕಾರ್‌ಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಸಮ್ಮೇಳನದ ಸ್ಥಳದವರೆಗೆ ನಗರ ಸಾರಿಗೆ ಬಸ್‌ಗಳ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. 

ನಗರದಲ್ಲಿ ಕೈಗೊಂಡಿರುವ ರಸ್ತೆಗಳ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ ಹಾಗೂ ಪ್ರತಿನಿಧಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ