ಕಂದಾಯ ಅಧಿಕಾರಿಗಳು ಮಾಡಿದ ತಪ್ಪಿಗೆ ನನಗೇಕೆ ಶಿಕ್ಷೆ?

Published : Nov 14, 2016, 04:01 PM ISTUpdated : Apr 11, 2018, 12:59 PM IST
ಕಂದಾಯ ಅಧಿಕಾರಿಗಳು ಮಾಡಿದ ತಪ್ಪಿಗೆ ನನಗೇಕೆ ಶಿಕ್ಷೆ?

ಸಾರಾಂಶ

ಕಂದಾಯ ಅಧಿಕಾರಿಗಳು ಮಾಡಿದ ತಪ್ಪಿಗೆ ನನಗೆ ಶಿಕ್ಷೆ ಏಕೆ ಎಂದು ಪ್ರಶ್ನಿಸಿ, ಮುಖಕ್ಕೆ ಕೆಂಪು ಚೀಲದ ಮುಸುಕು ಹಾಕಿಕೊಂಡು ಕೈಯಲ್ಲಿ ತಕ್ಕಡಿ ಹಿಡಿದು ನ್ಯಾಯ ನೀಡಿ ಜನಸೇವಕರೆ ಎಂದು ಬರಹದೊಂದಿಗೆ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಮೌನ ಧರಣಿ ನಡೆಸಿದರು.

ಚಿಕ್ಕಮಗಳೂರು (ನ.14): ಕಂದಾಯ ಅಧಿಕಾರಿಗಳು ಮಾಡಿದ ತಪ್ಪಿಗೆ ನನಗೆ ಶಿಕ್ಷೆ ಏಕೆ ಎಂದು ಪ್ರಶ್ನಿಸಿ, ಮುಖಕ್ಕೆ ಕೆಂಪು ಚೀಲದ ಮುಸುಕು ಹಾಕಿಕೊಂಡು ಕೈಯಲ್ಲಿ ತಕ್ಕಡಿ ಹಿಡಿದು ನ್ಯಾಯ ನೀಡಿ ಜನಸೇವಕರೆ ಎಂದು ಬರಹದೊಂದಿಗೆ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಮೌನ ಧರಣಿ ನಡೆಸಿದರು.

ಅಧಿಕಾರಿಗಳು ಮಾಡಿದ ತಪ್ಪಿನಿಂದ ವ್ಯಕ್ತಿಯೊಬ್ಬರು ಜಮೀನಿಗೆ ಅತಿಕ್ರಮ ಪ್ರವೇಶಿಸಿದ್ದಾರೆ. ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಶಾಂತಿ ಕಾಪಾಡುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ವೃತ್ತನಿರೀಕ್ಷಕರು, ತಹಸೀಲ್ದಾರ್ ಆದೇಶ ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ.

ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಕಡತಗಳು ನಾಪತ್ತೆಯಾಗಿದ್ದರು, ಪ್ರಕರಣ ದಾಖಲಾಗಿಲ್ಲ, ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಆದೇಶದಂತೆ ತಹಸೀಲ್ದಾರ್ ಮತ್ತು ವೃತ್ತ ನಿರೀಕ್ಷಕರು ಜಂಟಿಯಾಗಿ ಸ್ಥಳ ತನಿಖೆ ನಡೆಸಿ, ಭೂ ಕಬಳಿಕೆ ವ್ಯಕ್ತಿಗಳಿಂದ ಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಕೋರಿದ್ದಾರೆ.

ಸ್ಥಳ ತನಿಖೆ ನಡೆಸಿದಾಗ ಭೂ ಕಬಳಿಕೆ ಮಾಡಿದವರು ಸೂಕ್ತ ದಾಖಲೆ ನೀಡಲು ವಿಫಲವಾಗಿದ್ದರೂ ಕ್ರಮ ಏಕೆ ಜರುಗಿಸಿಲ್ಲ ಎಂದು ಪ್ರಶ್ನಿಸಿದ ಅವರು, ಕಡಿದಾಳು ಗ್ರಾಮದ ಸ.ನಂ ೨೧೭ರ ಕ್ರಮ ಪತ್ರದ ವಿಚಾರದಲ್ಲಿ ದೃಢೀಕರಣ ನೀಡದ ಕಡತ ಕಳ್ಳತನವಾದ ಬಗ್ಗೆ ಜಿಲ್ಲಾಧಿಕಾರಿಗಳು ದೂರು ನೀಡಿದ್ದರೂ ಪ್ರಕರಣ ದಾಖಲಾಗಿಲ್ಲ ಎಂದು ಆರೋಪಿಸಿದ್ದಾರೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ