
ಮೈಸೂರು (ಮೇ.20): ಕರ್ನಾಟಕದಲ್ಲಿ ಬಿಜೆಪಿ ರಾಷ್ಟ್ರೀಯ ಅಮಿತ್ ಶಾ ಸೀಕ್ರೇಟ್ ಸಮೀಕ್ಷೆ ವಿಚಾರದ ಹಿನ್ನೆಲೆಯಲ್ಲಿ ನಾವೂ ಕೂಡ ಕರ್ನಾಟಕದಲ್ಲಿ ಸಮೀಕ್ಷೆ ಮಾಡಿಸುತ್ತೇವೆ. ಪ್ರತಿ ವಿಧಾನಸಭಾವಾರು ಆಂತರಿಕ ಸಮೀಕ್ಷೆ ಮಾಡಿಸುತ್ತಿದ್ದೇನೆ. ಕರ್ನಾಟಕದಲ್ಲಿ ಚುನಾವಣಾ ವಾತಾವರಣ ಹೇಗೆ ಇದೆ ಅಂತ ತಿಳಿದುಕೊಳ್ಳಲು ಸಮೀಕ್ಷೆ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಪ್ರತಿ ಕ್ಷೇತ್ರದ ಶಾಸಕರ ಕೆಲಸ, ಕ್ಷೇತ್ರದ ಅಭಿವೃದ್ಧಿಗೆ ಬಗ್ಗೆಯೂ ಸಮೀಕ್ಷೆ ನಡೆಸಲಾಗುವುದು. ಹಿಂದೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಬಗ್ಗೆಯೂ ಸಮೀಕ್ಷೆ ನಡೆಸಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸಲಾಗುವುದು. ಸಮೀಕ್ಷಾ ವರದಿ ಹಾಗೂ ಪಕ್ಷದ ಕಾರ್ಯಕರ್ಯರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.