
ತುಮಕೂರು: ಭಾರತದ ಸಂವಿಧಾನದ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ತರಾಟೆಗೆ ತೆಗೆದುಕೊಂಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಾತ್ಮಕ ಹೇಳಿಕೆ ನೀಡದಿರುವಂತೆ ಈಗಾಗಲೇ ಹೆಗಡೆಯವರಿಗೆ ಸೂಚಿಸಲಾಗಿದೆ. ಅಲ್ಲದೇ ಅವರು ಸಂಸತ್‌ನಲ್ಲಿ ಕ್ಷಮೆಯನ್ನೂ ಕೇಳಿದ್ದಾರೆ. ಹೀಗಾಗಿ ಇದು ಮುಗಿದ ಅಧ್ಯಾಯ ಎಂದು ವಿವಾದಕ್ಕೆ ತೆರೆ ಎಳೆದರು.
ಹಾಗೆಯೇ ಗೋ.ಮಧುಸೂದನ್ ಸಹ ಎಚ್ಚರದಿಂದ ಮಾತನಾಡಬೇಕು ಎಂದರು.