ಕೆನರಾ ಬ್ಯಾಂಕ್‌ನಲ್ಲಿ 800 ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲುವುದು ಹೇಗೆ? ಇದಕ್ಕೆ ಇರಬೇಕಾದ ಅರ್ಹತೆಗಳೇನು? ಇನ್ನು ಇತರೆ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು, (ಅ.27): ಕೆನರಾ ಬ್ಯಾಂಕ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
800 ಪ್ರೊಬೆಷನರಿ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದ್ದು, ಆಫೀಶಿಯಲ್ ವೆಬ್‌ಸೈಟ್ ವಿಸಿಟ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
undefined
ಅರ್ಜಿ ಶುಲ್ಕ ಎಷ್ಟು?: ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಒಂದು ವರ್ಷದ ಟ್ರೈನಿಂಗ್ ನೀಡಲಾಗುವುದು. ಇನ್ನು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ ರೂ 708 ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ ರೂ 118 ಶುಲ್ಕ ಪಾವತಿಸಬೇಕಾಗಿದೆ.
ಅರ್ಜಿ ಸಲ್ಲಿಸಲು ಕೊನೆ ದಿನ: ಅಕ್ಟೋಬರ್ 23 ರಿಂದ ನವೆಂಬರ್ 13ರ ತನಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕಗಳನ್ನು ಪಾವತಿ ಮಾಡಲು ನವೆಂಬರ್ 13 ಅಂತಿಮ ದಿನವಾಗಿದೆ.
ವಿದ್ಯಾರ್ಹತೆ: ಪ್ರೊಬೆಷನರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಶೇ 60ರಷ್ಟು ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು. (ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 55 ಅಂಕ). ಅಥವ ಕೇಂದ್ರ ಅಥವ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷದ ವಯೋಮಿತಿ ನಿಗದಿ ಮಾಡಲಾಗಿದ್ದು, 1 ಅಕ್ಟೋಬರ್ 2018ಕ್ಕೆ ಅನ್ವಯವಾಗುವಂತೆ 20 ರಿಂದ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ: ಪ್ರೊಬೆಷನರಿ ಹುದ್ದೆಗೆ ಸೆಲೆಕ್ಟ್ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700 - 42,020 ರೂ. ವೇತನವನ್ನು ನಿಗದಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳು: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಯ್ಕೆ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಲಿಖಿತ ಪರೀಕ್ಷೆಗಳು ನಡೆಯಲಿವೆ.