ಬ್ರೇಕಿಂಗ್: SSLC ಪರೀಕ್ಷೆ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌

By Suvarna News  |  First Published May 20, 2020, 5:09 PM IST

ಕೊರೋನಾ ಲಾಕ್‌ಡೌನ್‌ನಿಂದಾಗಿ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಜೂನ್‌ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆದ್ರೆ, ಇದೀಗ ಪರೀಕ್ಷೆ ನಡೆಸದಂತೆ ಕೋರ್ಟ್‌ಗೆ ಬಾಗಿಲು ತಟ್ಟಿದ್ದಾರೆ.


ಬೆಂಗಳೂರು, (ಮೇ.20): ಇದೇ ಜೂನ್‌ 25ರಿಂದ ನಡೆಸಲು ತೀರ್ಮಾನಿಸಲಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸದಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಈಗಾಗಲೇ SSLC ಪರೀಕ್ಷೆಗಳನ್ನು ಜೂನ್ 25ರಿಂದ ಜುಲೈ 3ರ ವರೆಗೆ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ  ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಆದ್ರೆ, ಇದೀಗ ಪರೀಕ್ಷೆಗಳನ್ನು ನಡೆಸದಂತೆ ವಕೀಲ ಲೋಕೇಶ್ ಎನ್ನುವರು ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ್ದಾರೆ.

Latest Videos

undefined

ಕರ್ನಾಟಕ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಮಕ್ಕಳಿಗೂ ಹರಡುವ ಸಾಧ್ಯತೆಗಳಿವೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಕೂಡಲೇ ಪರೀಕ್ಷೆ ರದ್ದು ಪಡಿಸಬೇಕು. ಜತೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಉತ್ತೀರ್ಣ ಮಾಡಬೇಕೆಂದು  ಪಿಪಿಐಎಲ್‌ ಮನವಿ ಮಾಡಿಕೊಂಡಿದ್ದಾರೆ. 

ಈ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ.27ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿದ್ದು, ನ್ಯಾಯಾಲಯ ಏನು ಹೇಳುತ್ತೆ ಎನ್ನುವುದು ಕಾದುನೋಡಬೇಕಿದೆ. 

ಮಾರ್ಚ್‌ನಲ್ಲೇ ಈ ಪರೀಕ್ಷೆಗಳು ನಡೆಯಬೇಕಿತ್ತು. ಆದ್ರೆ, ಕೊರೋನಾ ಭೀತಿಯಿಂದ ಲಾಕ್‌ಡೌನ್ ಹೇರಲಾಗಿತ್ತು. ಇದರಿಂದ ಕೊನೆಗೆ ಅಳೆದು ತೂಗಿ ಜೂನ್ 25ರಿಂದ 10ನೇ ತರಗತಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

click me!