10ನೇ ತರಗತಿ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದ ಆಂಧ್ರ ಸರ್ಕಾರ

By Suvarna NewsFirst Published Jun 21, 2020, 5:58 PM IST
Highlights

ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆ ರದ್ದುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಅಮರಾವತಿ, (ಜೂನ್.21): ತೆಲಂಗಾಣ ಮತ್ತು ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿದೆ. ಇದರ ಬೆನ್ನಲ್ಲೇ  ಆಂಧ್ರಪ್ರದೇಶ ಕೂಡ ಹತ್ತನೇ ಕ್ಲಾಸ್ ಪರೀಕ್ಷೆ ರದ್ದು ಮಾಡುವುದಾಗಿ ಘೋಷಿಸಿದೆ. 

ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಈ ಬಾರಿಯ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಬೆಳಗಾವಿ: SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೂ ಕೊರೋನಾ ಸೋಂಕು!

ಆಂಧ್ರಪ್ರದೇಶದ ಜಗನ್ ಮೋಹನ್ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಕಾರಣ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಈ ಬಾರಿಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದಿದೆ.

ಮಾರ್ಚ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದವು. ತೆಲಂಗಾಣ, ತಮಿಳುನಾಡು ರಾಜ್ಯಗಳು ಪರೀಕ್ಷೆಯನ್ನು ರದ್ದುಗೊಳಿಸಿದ್ದವು, ಸದ್ಯ ಆಂಧ್ರಪ್ರದೇಶ ರಾಜ್ಯವೂ ಇದೇ ನಿರ್ಧಾರ ಕೈಗೊಂಡಿದೆ.

ಆದ್ರೆ, ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಿಯೇ ತೀರುತ್ತೇವೆ ಎಂದು ಹಠಕ್ಕೆ ಬಿದ್ದಿದ್ದು, ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಪರೀಕ್ಷೆಗಳು ನಡೆಯಲಿವೆ.

click me!