
ಮಂಗಳೂರು: 2018ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ 1, 2A, 3A ಹಾಗೂ 3Bಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ‘ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ’ಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ. ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್‌ಸೈಟ್ www.backwardclasses.kar.nic.in ಅಥವಾ ಸಹಾಯವಾಣಿ ಸಂಖ್ಯೆ: 8050770004 ಸಂಪರ್ಕಿಸಬಹುದು.
ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:
ಇದನ್ನೂ ಓದಿ: