ಸುಪ್ರೀಂಕೋರ್ಟ್ ಅಂಗಳಕ್ಕೆ ಕರ್ನಾಟಕ SSLC ಪರೀಕ್ಷೆ: ರದ್ದಾಗುತ್ತಾ? ನಡೆಯುತ್ತಾ?

By Suvarna NewsFirst Published Jun 9, 2020, 4:41 PM IST
Highlights

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸ್ಬೇಕಾ? ಬೇಡ್ವಾ? ಎನ್ನುವ ಗೊಂದಲಗಳಿದ್ದು, ಇದರ ಮಧ್ಯೆ ತಮಿಳುನಾಡು ಮತ್ತು ತೆಲಂಗಾಣ ಸರ್ಕಾರ ಹತ್ತನೇ ತರಗತಿ ಪರೀಕ್ಷೆ ರದ್ದು ಮಾಡಿದೆ. ಈಗ ರಾಜ್ಯದಲ್ಲೂ ಈ ಬಗ್ಗೆ ಕೂಗು ಕೇಳಿ ಬರುತ್ತಿವೆ.

ಬೆಂಗಳೂರು, (ಜೂನ್.09):  ತೆಲಂಗಾಣ ಮತ್ತು ತಮಿಳುನಾಡು ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಮೂಲದ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಎನ್ನುವರು ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

10ನೇ ತರಗತಿ ಪರೀಕ್ಷೆ ಕ್ಯಾನ್ಸಲ್, ವಿದ್ಯಾರ್ಥಿಗಳಿಗೆ ಸಿಕ್ತು ಮುಂದಿನ ಕ್ಲಾಸ್‌ಗೆ ಗ್ರೇಸ್

ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರ ಮಧ್ಯೆ ಸರ್ಕಾರ ಹತ್ತನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿದೆ. ಇದನ್ನ ಪ್ರಶ್ನೆ ಸುಪ್ರೀಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ.

ಆದ್ರೆ, ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಲಾಗದು ಎಂದು ಸ್ಪಷ್ಟಪಡಿಸಿದ್ದಾರೆ.

"

ಈಗಾಗಲೇ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ನಿರ್ಧಾರ ಬದಲಾಯಿಸುವ ಮಾತೇ ಇಲ್ಲ. ಜೂನ್‌ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ದತೆ ನಡೆಸಿಕೊಳ್ಳಿ ಎಂದು ಹೇಳಿದ್ದಾರೆ.

ಈ ಹಿಂದೆ ವಕೀಲರೊಬ್ಬರು ಕರ್ನಾಟಕ ಹೈಕೋರ್ಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಂತೆ ಅರ್ಜಿ ಸಲ್ಲಿದ್ದರು. ಆದ್ರೆ, ಕೋರ್ಟ್ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆ ನಡೆಸುವಂತೆ ಸರ್ಕಾರ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

click me!