ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಿಗದಿಯಂತೆ ನಡೆಯಲಿವೆ

By Suvarna NewsFirst Published Jul 10, 2020, 7:10 PM IST
Highlights

ಪದವಿ ದ್ವಿತೀಯ ವರ್ಷದ ಪರೀಕ್ಷೆಗಳನ್ನ ರದ್ದು ಮಾಡಲಾಗಿದ್ದು, ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಇನ್ನು ಸಿಇಟಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ.

ಬೆಂಗಳೂರು, (ಜು.10): ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗಳು ನಿಗದಿಯಂತೆ ಇದೇ ಜುಲೈ 30 ಹಾಗೂ 31ರಂದು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದವಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಸೆಪ್ಟೆಂಬರ್‌ನಲ್ಲಿ ಪರೀಕ್ಷೆಗಳನ್ನ ನಡೆಸಲಾಗುತ್ತೆ. ಹಾಗೂ ಪಿಜಿ‌ ಸಿಇಟಿ ಆಗಸ್ಟ್ 8 ಮತ್ತು 9 ನಡೆಯಲಿದೆ.‌ ಆಗಸ್ಟ್ 9 ರಂದು ಡಿಪ್ಲೋಮಾ ‌ಸಿಇಟಿ ನಡೆಯಲಿದೆ ಎಂದು ಮಾಹಿತಿ ನೀಡಿದರು. 

ಕರ್ನಾಟಕ ಸಿಇಟಿ ಪರೀಕ್ಷೆ 2020: ವೇಳಾಪಟ್ಟಿ ಪ್ರಕಟ

ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಇಟಿ ಘಟಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅವರು ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.

ಇನ್ನು ಕೆ-ಸೆಟ್ ಪರೀಕ್ಷೆಗಳ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಪರೀಕ್ಷೆ ತಡ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಈ ಹಿನ್ನಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ವಹಿಸಿ ಪರೀಕ್ಷೆ ನಡೆಸಲಾಗುವುದು. ಸಮರ್ಪಕ ಸ್ಯಾನಿಟೈಸೇಷನ್ ಮತ್ತು ಸಾಮಾಜಿಕ ಅಂತರಕ್ಕೆ ಧಕ್ಕೆ ಆಗದ ಹಾಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದರು.

click me!