
ಬೆಂಗಳೂರು, (ಏ.30): ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷದ ವಿಷಯ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಶಾಲೆಗಳಿಗೆ ಅಭಿನಂದನೆಗಳು ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
SSLC ಫಲಿತಾಂಶ ಪ್ರಕಟ, ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ
10ನೇ ತರಗತಿ (SSLC) ಫಲಿತಾಂಶ ಪ್ರಕಟ ಆಗುತ್ತಿದ್ದಂತೆ ಸರಣಿ ಟ್ವೀಟ್ ಮಾಡಿರುವ ಸಿಎಂ, ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷದ ವಿಷಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದುವ ಅಗತ್ಯವಿಲ್ಲ. ಮುಂದಿನ ಬಾರಿ ಹೆಚ್ಚಿನ ಪರಿಶ್ರಮ ವಹಿಸಿ ಪರೀಕ್ಷೆ ಎದುರಿಸಿ ಯಶಸ್ವಿಯಾಗಿ ಎಂದು ಹಾರೈಸಿದ್ದಾರೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶ ತ್ವರಿತವಾಗಿ ಪ್ರಕಟವಾಗುವ ಮೂಲಕ ಪೋಷಕರು ಹಾಗೂ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ.
ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಯಶಸ್ವಿಯಾಗಿ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಹೃತ್ಪೂರ್ವಕ ಅಭಿನಂದನೆಗಳು.
ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ ಎಂದು ಟ್ವೀಟ್ ಮಾಡಿದ್ದಾರೆ.