2020-21ನೇ ಸಾಲಿನ ಶೈಕ್ಷಣಿಕ ವರ್ಷದ ಕಾಲೇಜು ಆರಂಭ: ಸಿದ್ಧತೆ ಮಾಡಿಕೊಳ್ಳುವಂತೆ ವಿವಿಗಳಿಗೆ ಸೂಚನೆ

Published : Jul 10, 2020, 06:37 PM ISTUpdated : Jul 10, 2020, 06:48 PM IST
2020-21ನೇ ಸಾಲಿನ ಶೈಕ್ಷಣಿಕ ವರ್ಷದ ಕಾಲೇಜು ಆರಂಭ: ಸಿದ್ಧತೆ ಮಾಡಿಕೊಳ್ಳುವಂತೆ ವಿವಿಗಳಿಗೆ ಸೂಚನೆ

ಸಾರಾಂಶ

ಕೊರೋನಾ ಭೀತಿಯಿಂದಾಗಿ ಈ ವರ್ಷ ಶಾಲಾ-ಕಾಲೇಜುಗಳ ಶೈಕ್ಷಣಿಕ ತರಗತಿಗಳು ಆರಂಭವಾಗುವುದು ಅನುಮಾನ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ಕಾಲೇಜು ಆರಂಭಿಸಲು ಮುಂದಾಗಿದೆ. ಯಾವಾಗಿನಿಂದ?

ಬೆಂಗಳೂರು (ಜುಲೈ 10): ಇದೇ ಅಕ್ಟೋಬರ್‌ 01 ರಿಂದ ಕಾಲೇಜುಗಳು ತೆರೆಯಲಿದ್ದು, ಎಂದಿನಂತೆ ತರಗತಿಗಳು ನಡೆಯಲಿವೆ ಎಂದು  ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥ ನಾರಾಯಣ್, ಕಾಲೇಜು ಮತ್ತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಸೆಪ್ಟೆಂಬರ್‌ ಮೊದಲ ತಿಂಗಳಿನಿಂದ ಆನ್‌ಲೈನ್‌ ತರಗತಿಗಳು ನಡೆಯಲಿವೆ. ಆದರೆ, ಅಕ್ಟೋಬರ್‌ 01 ರಿಂದ ಈ ವರ್ಷದ ಶೈಕ್ಷಣಿಕ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದಲ್ಲಿ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ರದ್ದು

2020-21ನೇ ಸಾಲಿನ ಶೈಕ್ಷಣಿಕ ವರ್ಷದ ಮೊದಲ ಸೆಮಿಸ್ಟರ್‌ ಶೈಕ್ಷಣಿಕ ಚಟುವಟಿಕೆಗಳನ್ನು ಸೆಪ್ಟೆಂಬರ್ 01 ರಿಂದ ಆರಂಭಿಸಲು ವಿವಿಗಳಿಗೆ ಸೂಚಿಸಲಾಗಿದೆ. ಆರಂಭದಲ್ಲಿ ಆನ್‌ಲೈನ್‌ ತರಗತಿಗಳನ್ನು ಆರಂಭಿಸಿ, ಅಕ್ಟೋಬರ್ 1 ರಿಂದ ಆಫ್‌ಲೈನ್‌ ತರಗತಿ ಆರಂಭಿಸಲು ಸೂಚಿಸಲಾಗಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳನ್ನು ವಿವಿಗಳು ಮಾಡಿಕೊಳ್ಳಬೇಕು ಎಂದು ಅಶ್ವತ್ಥ ನಾರಾಯಣ ವಿವಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕೊರೋನಾ ಭೀತಿಯಿಂದಾಗಿ ಈ ವರ್ಷ ಶಾಲಾ-ಕಾಲೇಜುಗಳ ಶೈಕ್ಷಣಿಕ ತರಗತಿಗಳು ಆರಂಭವಾಗುವುದು ಅನುಮಾನ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ಕಾಲೇಜು ಆರಂಭಿಸಲು ಮುಂದಾಗಿದೆ. 

ಇನ್ನು ಶಾಲೆಗಳನ್ನ ಸಹ ಅಕ್ಟೋಬರ್ ತಿಂಗಳಲ್ಲೇ ಪ್ರಾರಂಭಿಸುವ ಸಾಧ್ಯತೆಗಳಿವೆ ಆದ್ರೆ, ಇದುರವರಗೆ ಯಾವುದೇ ಈ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿಲ್ಲ.

PREV
click me!

Recommended Stories

ಸರ್ಕಾರಿ ಆಂಗ್ಲ ಶಾಲೇಲಿ ಕಲಿತ 30,000 ಮಕ್ಕಳು ಅತಂತ್ರ! ಬಿಇಒ, ಡಿಡಿಪಿಐ ಯಾರಿಂದಲೂ ಸ್ಪಷ್ಟ ಉತ್ತರವಿಲ್ಲ! ಯಾರನ್ನು ಕೇಳುವುದು?
ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿ ವೇತನಕ್ಕೆ ಮಂಡ್ಯದ ಮೂವರು ವಿದ್ಯಾರ್ಥಿಗಳು ಆಯ್ಕೆ