ಸಚಿವ ಸುರೇಶ್ ಕುಮಾರ್ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ

By Suvarna NewsFirst Published Jun 23, 2020, 4:28 PM IST
Highlights

ಕೊರೋನಾ ಸಂಕಷ್ಟದ ನಡುವೆಯೇ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ದೂರು ದಾಖಲಿಸಿಕೊಳ್ಳುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. 
 

ಬೆಂಗಳೂರು, (ಜೂನ್.23): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಅಧ್ಯಕ್ಷ ಆದರ್ಶ್ ಅಯ್ಯರ್, ದೂರು ದಾಖಲಿಸಿಕೊಳ್ಳುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ. 

SSLC ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಿ; ಜಿಲ್ಲಾಡಳಿತಗಳಿಗೆ ಸುರೇಶ್‌ಕುಮಾರ್‌ ಸೂಚನೆ

ಕೊರೋನಾ ಸಂಕಷ್ಟದ ನಡುವೆಯೇ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ  ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ಈ ಹಿಂದೆ ಇದೇ ಆದರ್ಶ್ ಐಯ್ಯರ್ ಅವರು ಬೆಂಗಳೂರಿನ ಹಲಸೂರು ಗೇಟ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಆದ್ರೆ ಇದಕ್ಕೆ ಪೊಲೀಸ್ರು ಸರಿಯಾಗಿ ಸ್ಪಂದಿಸದ ಕಾರಣ, ದೂರು ದಾಖಲಿಸಿಲು ಪೊಲೀಸರಿಗೆ ಸೂಚನೆ ನೀಡುವಂತೆ ಕೋರ್ಟ್‌ಗ ದೂರು ಸಲ್ಲಿಕೆ ಮಾಡಿದ್ದಾರೆ.

ಬೆಳಗಾವಿ: SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೂ ಕೊರೋನಾ ಸೋಂಕು!

ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಿದ್ದರೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ಮಕ್ಕಳ ಜೀವದ ಜೊತೆ ಸಚಿವರು ಚೆಲ್ಲಾಟವಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ದೂರು ನೀಡಿದ್ರು ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ. ಈ ಹಿನ್ನೆಲೆಯಲ್ಲಿ ಸೆಕ್ಷನ್ 16(3) ಅಡಿಯಲ್ಲಿ ದೂರು ದಾಖಲಿಸಿಕೊಳ್ಳಬೇಕು ಎಂದು ಸಿಟಿ ಸಿವಿಲ್ ಕೋರ್ಟ್‌ಗೆ ಆದರ್ಶ್ ಐಯ್ಯರ್  ಮನವಿ ಮಾಡಿಕೊಂಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ. ಆದರೂ ರಾಜ್ಯ ಸರ್ಕಾರ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.

ಕೊರೋನಾ ಭೀತಿ ನಡುವೆಯೂ ಸುಮಾರ್ 8.4 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ.

click me!