ಸದ್ಯಕ್ಕೆ ಶಾಲೆ ಇಲ್ಲ: ಪ್ರೌಢ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಹೊಸ ಕಾರ್ಯಕ್ರಮ...!

Published : Aug 14, 2020, 04:10 PM IST
ಸದ್ಯಕ್ಕೆ ಶಾಲೆ ಇಲ್ಲ: ಪ್ರೌಢ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಹೊಸ ಕಾರ್ಯಕ್ರಮ...!

ಸಾರಾಂಶ

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಶೈಕ್ಷಣಿಕ ಕ್ಷೇತ್ರ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಸದ್ಯಕಂತೂ ಶಾಲೆ ಪ್ರಾರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಿರಂತರ ಕಲಿಕೆ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿದೆ.

ಬೆಂಗಳೂರು, (ಆ.14) : ಈಗಾಗಲೇ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮ ಪ್ರಸಾರವಾಗಿದೆ.  

ಇದರ ಮುಂದುವರೆದ ಭಾಗವಾಗಿ ದಿನಾಂಕ  ದಿನಾಂಕ 17-08-2020 ರಿಂದ ದಿನಾಂಕ 11-09-2020ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ ಪ್ರಸಾರವಾಗಲಿದೆ.

ಶಾಲೆ ಪ್ರಾರಂಭದ ಸುದ್ದಿಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್

ಈ ಕುರಿತಂತೆ ಡಿ ಎಸ್ ಇ ಆರ್ ಟಿ ಮಾಹಿತಿ ನೀಡಿದ್ದು, ದಿನಾಂಕ 17-08-2020 ರಿಂದ ದಿನಾಂಕ 11-09-2020ರವರೆಗೆ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರವಾಗಲಿದೆ ಎಂದು ತಿಳಿಸಿದೆ.

ಸಂವೇದ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮವನ್ನು ಕನ್ನಡ, ಇಂಗ್ಲೀಷ್ (ಪ್ರಥಮ ಹಾಗೂ ದ್ವಿತೀಯ ಭಾಷೆ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಪ್ರಥಮ ಭಾಷೆ ಸಂಸ್ಕೃತ, ಹಿಂದಿ (ತೃತೀಯ) ಮತ್ತು ಪ್ರಥಮ ಭಾಷೆ ಉರ್ದು ವಿಷಯಗಳಲ್ಲಿ ಪಾಠಗಳನ್ನು ಸಿದ್ಧಪಡಿಸಲಾಗಿದೆ.

  ಪ್ರತಿ ದಿನ ಬೆಳಿಗ್ಗೆ 9.30ರಿಂದ 11 ಗಂಟೆಯವರೆಗೆ, 11.30ರಿಂದ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ರಿಂದ 4.30ರವರೆಗೆ ಹಾಗೂ 5 ರಿಂದ 5.30ರವರೆಗೆ ನಿಗದಿತ ವೇಳಾಪಟ್ಟಿಯಂತೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.  ಎಲ್ಲಾ ಶಾಲೆಗಳ ಶಿಕ್ಷಕರು, ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳಿಗೆ ತಲುಪಿಸುವಂತೆ ಸೂಚಿಸಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ