ಮುಕ್ತ ವಿವಿ ಶಿಕ್ಷಣ ಪ್ರವೇಶ ಪ್ರಮಾಣ ಹೆಚ್ಚಳಕ್ಕೆ ಸೂಚನೆ

By Kannadaprabha News  |  First Published May 29, 2020, 8:58 AM IST

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಕಾರ್ಯಸೂಚಿ ರೂಪಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ವಿ.ವಿ. ಕುಲಪತಿಗಳಿಗೆ ಸೂಚಿಸಿದ್ದಾರೆ.


ಬೆಂಗಳೂರು(ಮೇ 29): ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಕಾರ್ಯಸೂಚಿ ರೂಪಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ವಿ.ವಿ. ಕುಲಪತಿಗಳಿಗೆ ಸೂಚಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆನ್‌ಲೈನ್‌ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

Tap to resize

Latest Videos

undefined

ಕರ್ನಾಟಕ ಸಿಎಂ ಬದಲಿಸಲು ಒತ್ತಡ: ಸೊಪ್ಪು ಹಾಕುತ್ತಾ ಬಿಜೆಪಿ ಹೈ ಕಮಾಂಡ್?

ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸುವಲ್ಲಿ ಮುಕ್ತ ವಿವಿ ಪಾತ್ರ ಮುಖ್ಯವಾಗಿದೆ. ಈ ಸಂಬಂಧ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕಾರ್ಯಸೂಚಿ ರೂಪಿಸುವಂತೆ ಸಂಬಂಧಪಟ್ಟವಿವಿ ಕುಲಪತಿಗಳಿಗೆ ಸೂಚಿಸಿದರು. ಮುಕ್ತ ವಿವಿ ವಿರುದ್ಧ ಹಣ ದುರ್ಬಳಕೆ ಸೇರಿದಂತೆ ಹಲವು ಆರೋಪಗಳಿವೆ. ಇಂತಹ ಕಳಂಕಗಳಿಂದ ಮುಕ್ತರಾಗಲು ಕ್ರಿಯಾ ಯೋಜನೆ ರೂಪಿಸಬೇಕು ಎಂದರು. ಉತ್ತಮ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸುವ ಜತೆಗೆ ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ ಮಾದರಿ ವ್ಯವಸ್ಥೆ ತರುವಂತೆ ತಿಳಿಸಿದರು. 

ಕೆಸೆಟ್‌ ಆನ್‌ಲೈನ್‌ ತರಬೇತಿ:

ಯುಪಿಎಸ್‌ಸಿ, ಕೆಪಿಎಸ್‌ಸಿ, ಕೆಸೆಟ್‌, ಯುಜಿಸಿ-ನೆಟ್‌, ಪಿಎಸ್‌ಐ, ಬ್ಯಾಂಕಿಂಗ್‌, ಶಿಕ್ಷಕರ ತರಬೇತಿ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್‌ ತರಬೇತಿ ನಡೆಯುತ್ತಿರುವುದು ಶ್ಲಾಘನೀಯ. ಇಂದರಿಂದ ಕೊರೋನಾ ಲಾಕ್‌ಡೌನ್‌ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುತ್ತಿದ್ದವರು ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದವರ ಅಭ್ಯಾಸಕ್ಕೆ ಆನ್‌ಲೈನ್‌ ತರಗತಿಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.

click me!