ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪಿಯುಸಿ ರಿಸಲ್ಟ್‌ ಶೇ. 10 ರಷ್ಟು ಹೆಚ್ಚಳ: ಕಾರಜೋಳ

Suvarna News   | Asianet News
Published : Jul 20, 2020, 01:39 PM IST
ಮುರಾರ್ಜಿ ದೇಸಾಯಿ ವಸತಿ  ಕಾಲೇಜುಗಳ ಪಿಯುಸಿ ರಿಸಲ್ಟ್‌ ಶೇ. 10 ರಷ್ಟು  ಹೆಚ್ಚಳ: ಕಾರಜೋಳ

ಸಾರಾಂಶ

ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ಧತೆ| ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ಶಾಲೆಗಳ ವಿದ್ಯಾರ್ಥಿಗಳು ವಸತಿ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗ ಮುಂದುವರೆಸಿ, ಕೀರ್ತಿ ತರಬೇಕು: ಡಿಸಿಎಂ ಗೋವಿಂದ ಕಾರಜೋಳ|

ಬೆಂಗಳೂರು(ಜು.20): ಮುರಾರ್ಜಿ ದೇಸಾಯಿ ವಸತಿ  ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದ್ದು,  ವಸತಿ ಕಾಲೇಜುಗಳ ಪ್ರವೇಶಕ್ಕೆ ಕೇಂದ್ರೀಕೃತ ಆನ್‌ಲೈನ್ ಅರ್ಜಿ ಆಹ್ವಾನಿಸಲು  ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಸೂಚಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕಿನ ನಡೆಯುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವು ಅತ್ಯುತ್ತಮವಾಗಿ ಬಂದಿದ್ದು,  ಸಮಾಜ  ಕಲ್ಯಾಣ ಇಲಾಖೆ ವ್ಯಾಪ್ತಿಯ 66  ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿದ್ಯಾರ್ಥಿಗಳು ಶೇ. 86.4 ರಷ್ಟು ವಿದ್ಯಾರ್ಥಿಗಳು  ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರಲ್ಲಿ ಶೇ. 75.3 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. 1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಮತ್ತಿತರ ಪ್ರಮುಖ ವಿಷಯಗಳಲ್ಲಿ 72 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. 11 ಕಾಲೇಜುಗಳಲ್ಲಿ ಶೇ. 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  

ವರ್ಷ​ದಲ್ಲಿ ವಿಜಯಪುರ ವಿಮಾ​ನ ನಿಲ್ದಾಣ ಪೂರ್ಣ: ಡಿಸಿಎಂ ಗೋವಿಂದ ಕಾರ​ಜೋ​ಳ

ಕಳೆದ ವರ್ಷ ಶೇ.76.4 ರಷ್ಟು ಫಲಿತಾಂಶ ಬಂದಿತ್ತು.  ವಸತಿ ಕಾಲೇಜುಗಳ ಫಲಿತಾಂಶವು  ರಾಜ್ಯದ ಒಟ್ಟಾರೆ ಪಿಯುಸಿ ಫಲಿತಾಂಶಕ್ಕಿಂತ ಶೇ. 25. ರಷ್ಟು ಹೆಚ್ಚಳವಾಗಿದೆ.  ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ಶಾಲೆಗಳ ವಿದ್ಯಾರ್ಥಿಗಳು ವಸತಿ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗ ಮುಂದುವರೆಸಿ, ಕೀರ್ತಿ ತರಬೇಕು ಎಂದು ತಿಳಿಸಿದ್ದಾರೆ.
 

PREV
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ