SSLC-PUC ಪರೀಕ್ಷೆ: ವಿದ್ಯಾರ್ಥಿ, ಪೋಷಕರಲ್ಲಿ ಸಚಿವ ಸುರೇಶ್ ಕುಮಾರ್ ವಿಶೇಷ ಮನವಿ

By Suvarna News  |  First Published Apr 9, 2020, 5:36 PM IST

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯಾ ಪಿಯುಸಿಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟವಾಗಿದೆ ಎನ್ನುವ ಸುದ್ದಿಗೆ ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಫೇಸ್‌ಬುಕ್ ಲೈವ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಲ್ಲಿ ವಿಶೇಷ ಮನವಿ ಮಾಡಿಕೊಳ್ಳುವುದರ ಜೊತೆಗೆ SSLC  ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.


ಬೆಂಗಳೂರು, (ಏ.09): ರಾಜ್ಯದಲ್ಲಿ SSLC ಮತ್ತು ಪಿಯುಸಿಯ ಬಾಕಿ ಉಳಿದ ಒಂದು ಪರೀಕ್ಷೆಯ ಬಗ್ಗೆ ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇಮದು (ಗುರುವಾರ) ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಸಚಿವರು ಈ ಮಾಹಿತಿಗಳನ್ನು ಹಂಚಿಕೊಂಡರು. 

Tap to resize

Latest Videos

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ವಾಟ್ಸಾಪ್‌ನಲ್ಲಿ ಪಾಠ, ಹೋಂವರ್ಕ್

ಈಗ ಕೊರೋನಾ ವೈರಸ್ ಸಂಕಷ್ಟ ಕಾಲವಾದ್ದರಿಂದ ಈಗ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಸೋಂಕು ಮುಗಿಯದೇ ಯಾವುದೇ ಕಾರಣಕ್ಕೂ ಪರೀಕ್ಷೆಗಳನ್ನು ನಡೆಸುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿ ನಂಬಬೇಡಿ ಎಂದು ಮಕ್ಕಳಿಗೆ ಹಾಗೂ ಪೋಷಕರಲ್ಲಿ ಮನವಿ ಮಾಡಿದರು.

ಪರೀಕ್ಷೆಗಳ ಮುಂದಿನ ದಿನಾಂಕಗಳ ಬಗ್ಗೆ ನಾನೇ ಖುದ್ದಾಗಿ ತಿಳಿಸುತ್ತೇನೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸುವ ಸಂಬಂಧ ಗಂಭೀರ ಯೋಚನೆ ನಡೆಸಿದ್ದೇವೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರಿಗೆ ಸೂಕ್ತ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

'ಎಸ್ಸೆಸ್ಸೆಲ್ಸಿ, ಪಿಯುಗೆ ಪರೀಕ್ಷೆ ಬರೆಯದೇ ಪಾಸ್‌ ಇಲ್ಲ'

ರಾಜ್ಯದ ಎಲ್ಲಾ ಡಿಡಿಪಿಐ ಸಭೆಯನ್ನು ಸೋಮವಾರ ಕರೆಯಲಾಗಿದೆ. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿನ ತೀರ್ಮಾನದ ನಂತ್ರ ಪರೀಕ್ಷಾ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

SSLC ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಚಾನಲ್

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಕಾಶವಾಣಿ ಮತ್ತು ದೂರದರ್ಶನದ ಮೂಲಕ ಪುನರ್ ಮನನ ಕಾರ್ಯಕ್ರಮ ನೀಡುವ ಸಂಬಂದ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುತ್ತದೆ‌. ಇದೇ ರೀತಿ ಎಲ್ಲ ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಅನುಕೂಲ ಆಗುವಂತೆ ಮುಂದಿನ ವಾರದಲ್ಲಿ ಯೂಟ್ಯೂಬ್ ಚಾನಲ್ ಆರಂಭಿಸಲಿದ್ದೇವೆ ಎಂದರು.

ಇದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಸಹಕಾರಿಯಾಗಲಿದೆ. 

click me!