ವಿದ್ಯಾರ್ಥಿಗಳ ನೆರವಿಗೂ ಬಂದ ಸೋನು ಸೂದ್‌: ಕೇಂದ್ರ ಸರ್ಕಾರ ಸ್ಪಂದಿಸುತ್ತಾ..?

By Suvarna NewsFirst Published Aug 26, 2020, 3:56 PM IST
Highlights

ಬಾಲಿವುಡ್‌ ನಟ ಸೋನುಸೂದ್‌ ಅವರು ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ನೆರವಿಗೂ ಧಾವಿಸಿದ್ದಾರೆ.

ನವದೆಹಲಿ, (ಆ.26): ಇದೇ ಸೆಪ್ಟೆಂಬರ್‌ನಲ್ಲಿ  JEE, NEET ಪರೀಕ್ಷೆಗಳು ನಡೆಸಲು ಕೇಂದ್ರ ಸರ್ಕಾರ ಎಲ್ಲಾ ತಯಾರಿ ನಡೆಸಿದೆ. ಮತ್ತೊಂದೆಡೆ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನ ಮುಂದೂಡಬೇಕೆಂಬ ಕೂಗು ಎದ್ದಿದೆ. 

ಈ ಕೂಗಿಗೆ  ಸ್ವಿಡನ್‌ ಪರಿಸರ ಯುವ ಹೋರಾಟಗಾರ್ತಿ ಗ್ರೇಟಾ ಥನ್‍ಬರ್ಗ್ ಧ್ವನಿಗೂಡಿಸಿದ್ದು, ಇದೀಗ ಬಾಲಿವುಡ್‌ ನಟ ಸೋನು ಸೂದ್‌ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ್ದಾರೆ. 

ಹೌದು.. ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಸಾವಿರಾರು ವಲಸೆ ಕಾರ್ಮಿಕರಿಗೆ ನೆರವಾಗುವ ಮೂಲಕ ಮಾನವೀತೆ ಮೆರೆದಿದ್ದ ಬಾಲಿವುಡ್‌ ನಟ ಸೋನು ಸೂದ್‌ ಈಗ JEE ಹಾಗೂ NEET ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

ಭಾರತದಲ್ಲಿ JEE, NEET ಪರೀಕ್ಷೆ ಮುಂದೂಡಿ ಅಭಿಯಾನಕ್ಕೆ ಸ್ವಿಡನ್‌ ಪರಿಸರ ಹೋರಾಟಗಾರ್ತಿ ಸಾಥ್

ಈ ಬಗ್ಗೆ ಖಾಸಗಿ ಸುದ್ದಿವಾನಿಯೊಂದಿಗೆ‌ ಮಾಡಿರುವ ಸೋನು ಸೂದ್‌, ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಈ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ನಾವೆಲ್ಲ ಗಮನ ಹರಿಸಬೇಕು. ಹಾಗಾಗಿ ಈ ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕೆಂದು ಮನವಿ ಮಾಡಿದ್ದಾರೆ. 

ನಾವು ಈ ವಿದ್ಯಾರ್ಥಿಗಳನ್ನು ಬೆಂಬಲಿಸಬೇಕು. ಈ ಪರೀಕ್ಷೆಗಳಲ್ಲಿ 26 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.  ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಸುಮಾರು ಎರಡ್ಮೂರು ತಿಂಗಳ ವಿನಾಯ್ತಿ ನೀಡಬೇಕು. ಆಗ ವಿದ್ಯಾರ್ಥಿಗಳು ಮಾನಸಿಕವಾಗಿ ಸಿದ್ಧರಾಗಿ ಪರೀಕ್ಷೆಗಳಿಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.

ಪರೀಕ್ಷೆ ನಡೆಯುವ ದಿನಾಂಕ
ಸೆಪ್ಟೆಂಬರ್.1 ರಿಂದ 6ರವರೆಗೆ ಜೆಇಇ ಮತ್ತು ವೈದ್ಯಕೀಯ ಮತ್ತು ಇಂಜಿನೀಯರಿಂಗ್ ಪ್ರವೇಶಕ್ಕಾಗಿ ನಡೆಸುವಂತ ಎನ್‌ಇಇಟಿ ಪರೀಕ್ಷೆ ಇದೇ ಸೆಪ್ಟೆಂಬರ್.13ಕ್ಕೆ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ದಿನಾಂಕ ನಿಗದಿ ಮಾಡಿದೆ.

ಈ ಪರೀಕ್ಷೆಗಳನ್ನ ಮುಂದೂಡುವಂತೆ ಕೆಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ, ಕೋರ್ಟ್, ಪರೀಕ್ಷೆ ಮುಂದೂಡುವ ಅರ್ಜಿಯನ್ನು ವಜಾಗೊಳಿಸಿತ್ತು.
 

click me!