ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷಾ ಕೇಂದ್ರ, ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ಬಿಡುಗಡೆ

By Suvarna NewsFirst Published Jun 3, 2020, 5:12 PM IST
Highlights

ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ  ಬಿಡುಗಡೆಯಾಗಿದೆ.

ಬೆಂಗಳೂರು, (ಜೂನ್.03): ಇದೇ ಜೂನ್ 18 ರಂದು ನಡೆಯುವ ಬಾಕಿ ಇರುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ  ಬಿಡುಗಡೆ ಮಾಡಲಾಗಿದೆ.

ಕೊರೋನಾ ವೈರಸ್​ ಭೀತಿಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ರಿಲೀಸ್ ಮಾಡಿದೆ.

ಕರ್ನಾಟಕದ SSLC, PUC ಪರೀಕ್ಷೆ ದಿನಾಂಕ ಘೋಷಣೆ

www,pue.kar.nic.in ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ  ಪರೀಕ್ಷಾ ಕೇಂದ್ರಕ್ಕೆ ಹೋಗಬಹುದಾಗಿದೆ.

ಇದು ಕೇವಲ ತಾತ್ಕಾಲಿಕ ಪಟ್ಟಿಯಾಗಿದ್ದು,  ಜೂನ್ 7 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು.  ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿಗೆ ಜೂನ್ 5ರವೆರೆಗೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿನಿಲಯ ತಾವು ವಾಸಿಸಿರುವ ಊರುಗಳಲ್ಲಿ ಹಾಗೂ ಬೇರೆ-ಬೇರೆ ಊರುಗಳಲ್ಲಿ ಕಲಿಯುತ್ತಿರುವ ಮಕ್ಕಳು ಲಾಕ್​ಡೌನ್​ ಹಿನ್ನೆಲೆಯಲ್ಲಿ ತಮ್ಮೂರಿಗೆ ವಾಪಸಾಗಿದ್ದಾರೆ.

ಅಂತವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಅವರಿರುವ ಸ್ಥಳದ ಸಮೀಪದ ಜಿಲ್ಲೆಯ ಅಥವಾ ತಾಲೂಕಿನಲ್ಲಿ ಅವರು ಬಯಸುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. 

click me!