ಆ.20ಕ್ಕೆ ಸಿಇಟಿ ರಿಸಲ್ಟ್ ಇಲ್ಲ: ಹೊಸ ದಿನಾಂಕ ಕೊಟ್ಟ ಡಿಸಿಎಂ ಅಶ್ವತ್ಥನಾರಾಯಣ

Published : Aug 19, 2020, 07:26 PM IST
ಆ.20ಕ್ಕೆ ಸಿಇಟಿ ರಿಸಲ್ಟ್ ಇಲ್ಲ: ಹೊಸ ದಿನಾಂಕ ಕೊಟ್ಟ ಡಿಸಿಎಂ ಅಶ್ವತ್ಥನಾರಾಯಣ

ಸಾರಾಂಶ

 ಆ.20ಕ್ಕೆ ಪ್ರಕಟವಾಗಬೇಕಿದ್ದಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಮುಂದೂಡಲಾಗಿದ್ದು, ರಿಸಲ್ಟ್ ಪ್ರಕಟವಾಗುವ ಹೊಸ ದಿನಾಂಕವನ್ನ ಡಿಸಿಎಂ ಅಶ್ವತ್ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರು, (ಆ.19): ನಾಳೆ ಅಂದ್ರೆ  ಆ.20ಕ್ಕೆ ಪ್ರಕಟವಾಗಬೇಕಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ತಾಂತ್ರಿಕ ಕಾರಣಗಳಿಂದಾಗಿ ಒಂದು ದಿನ ಮುಂದೂಡಲಾಗಿದೆ.

ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು  ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಆ.20ಕ್ಕೆ ಸಿಇಟಿ ರಿಸಲ್ಟ್, ಇಂಜಿನಿಯರಿಂಗ್ ಶುಲ್ಕ ಹೆಚ್ಚಳವಿಲ್ಲ ಎಂದ ಡಿಸಿಎಂ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಅಂದು (ಶುಕ್ರವಾರ)  ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು 
 ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಆಗಸ್ಟ್ 21 ಬೆಳಿಗ್ಗೆ 11ಕ್ಕೆ ಪತ್ರಿಕಾಗೋಷ್ಠಿ ಮೂಲಕ ಅಶ್ವತ್ಥನಾರಾಯಣ ಅವರು ಸಿಇಟಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿಲಿದ್ದು, http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ