ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ

By Suvarna News  |  First Published Jun 22, 2020, 6:19 PM IST

ಕೊರೋನಾ ಭೀತಿ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿಯೇ ತೀರುತ್ತೇವೆಂದು ರಾಜ್ಯ ಸರ್ಕಾರ ಸವಾಲಾಗಿ ಸ್ವೀಕರಿಸಿದೆ. ಇದರಿಂದ ಪರೀಕ್ಷೆಗೆ ಮಾರ್ಗಸೂಚಿಗಳನ್ನ ಪ್ರಕಟಿಸಿದೆ.ಅವು ಈ ಕೆಳಗಿನಂತಿವೆ.


ಬೆಂಗಳೂರು, (ಜೂನ್.22): ಕೊರೋನಾ ಭೀತಿ ಹಿನ್ನೆಲೆಯಲ್ಲಿ ವಿರೋಧದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧತೆಗಳನ್ನ ಮಾಡಿಕೊಂಡಿದೆ.

ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಇದಕ್ಕೆ ಸಂಬಂಧಿಸಿಂದತೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಕೆಲ ಮಾರ್ಗಸೂಚಿಗಳನ್ನ ಪ್ರಕಟಿಸಿದೆ.

Tap to resize

Latest Videos

ಬೆಳಗಾವಿ: SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೂ ಕೊರೋನಾ ಸೋಂಕು!

ವಿದ್ಯಾರ್ಥಿಗಳ ಸುರಕ್ಷತೆಗಾಗಿ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದ್ದು, ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಶಿಕ್ಷಣ ಇಲಾಖೆ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಗೈಡ್‌ಲೈನ್ ಈ ಕೆಳಗಿನಂತಿವೆ ನೋಡಿ.

ಗೈಡ್‌ಲೈನ್ಸ್‌

*ಪ್ರತಿ ವಿದ್ಯಾರ್ಥಿಗಳಿಗೂ ಆರೋಗ್ಯ ತಪಾಸಣೆ ಕಡ್ಡಾಯ
* ಪರೀಕ್ಷೆ ನಡೆಯುವ ಒಂದುವರೆ ಗಂಟೆ ಮೊದಲೇ ವಿದ್ಯಾರ್ಥಿಗಳು ಹಾಜರಾಗಬೇಕು
* ಆರೋಗ್ಯ ತಪಾಸಣೆಗೂ ಮುನ್ನ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು.
* ವಿದ್ಯಾರ್ಥಿಗಳು ಮಾಸ್ಕ್ ಮರೆತು ಬಂದ್ರೆ ತಪಾಸಣಾ ಕೇಂದ್ರದಲ್ಲೇ ಮಾಸ್ಕ್‌ ನೀಡಬೇಕು.
* ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರ ಉಪಯೋಗಿಸುವುದು ಕಡ್ಡಾಯ
* ಬೇರೆ ವಿದ್ಯಾರ್ಥಿಗಳನ್ನ ಅಪ್ಪಿಕೊಳ್ಳುವುದು, ಥ್ಯಾಂಕ್ಸ್ ಕೊಡುವುದು ಮುಟ್ಟುವುದು ಮತ್ತು ಉಗುಳುವುದನ್ನ ಮಾಡಬಾರದು.
* ಕಿಟಕಿ, ಬಾಗಿಲು ಮತ್ತು ಇತರೆ ವಸ್ತುಗಳನ್ನು ಅನಗತ್ಯವಾಗಿ ಮುಟ್ಟಬಾರದು
* ಪರೀಕ್ಷೆ ಬರೆಯುವಾಗ ಅನಾರೋಗ್ಯ ಕಂಡು ಬಂದರೆ ಮೇಲ್ವಿಚಾರಕರಿಗೆ ತಿಳಿಸಬೇಕು.
* ಪರೀಕ್ಷೆ ಕೇಂದ್ರ ಪ್ರವೇಶಿಸುವಾಗ, ಹೊರ ಹೋಗುವಾಗ ದೈಹಿಕ ಅಂತರ ಕಾಪಾಡಿಕೊಳ್ಳಬೇಕು.

ಶಿಕ್ಷಣ ಇಲಾಖೆ ಮೇಲೆ ತಿಳಿಸಲಾಗಿರುವ ಅಂಶಗಳನ್ನ ವಿದ್ಯಾರ್ಥಿಗಳು ಪಾಲಿಸಬೇಕು. ಮತ್ತು ಈ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಸಹ ಗಮನಿಸಬೇಕು.

click me!