ಹೊಸ ರೀತಿಯಲ್ಲಿ ಶಾಲೆಗಳು ಆರಂಭದ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದ ಶಿಕ್ಷಣ ಇಲಾಖೆ

By Suvarna News  |  First Published May 16, 2020, 7:32 PM IST

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ಪ್ರಾರಂಭದ ಬಗ್ಗೆ ಇದ್ದ ಎಲ್ಲಾ ಗೊಂದಲಗಳಗೆ ಸಾವರ್ಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.


ಬೆಂಗಳೂರು, (ಮೇ.16): ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವುದರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ.

ಇದರ ನಡುವೆ ಎರಡು ಪಾಳಿಯಲ್ಲಿ ತರಗತಿಗಳು ಪ್ರಾರಂಭವಾಗುತ್ತವೆ ಎನ್ನುವ ಸುದ್ದಿ ಹಬ್ಬಿದೆ. ಇದೀಗ ಶಿಕ್ಷಣ ಇಲಾಖೆ ಶಾಲೆಗಳು ಆರಂಭವಾಗುವ ಕುರಿತು ಬಂದಿರುವ ವರದಿಗಳಿಗೆ ಸಮಜಾಯಿಷಿ ನೀಡಿದೆ.

Latest Videos

undefined

 ಸಾಮಾಜಿಕ ಅಂತರ ಕಾಪಾಡುವ ಕುರಿತು ಪಾಳಿ ಪದ್ಧತಿಯಲ್ಲಿ ತರಗತಿಗಳನ್ನು ನಡೆಸುವ ಸಂಬಂಧ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳು ಆಗಿವೆ. ಆದ್ರೆ, ಇದೇ ಅಧಿಕೃತವಲ್ಲ ಎಂದು ಸ್ಪಷ್ಟಪಡಿಸಿದೆ.

ಮಕ್ಕಳನ್ನ ಅಡ್ಮಿಷನ್‌ ಮಾಡಿಕೊಳ್ಳಲು ಶಾಲೆಗಳಿಗೆ ಅನುಮತಿ: ತರಗತಿ ಪ್ರಾರಂಭ ಯಾವಾಗ..?

  2020-21ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭಿಸಬೇಂದು ನಿರಂತರವಾಗಿ ಅಧಿಕಾರಿಗಳ ಸಭೆ ಮೇಲೆ ಸಭೆ ನಡೆಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್‌ ಟ್ವೀಟ್ ಮಾಡಿದ್ದು, ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದ. ಇದರಿಂದ ತರಾತುರಿಯಲ್ಲಿ ಶಾಲೆಗಳನ್ನು ತೆರೆಯುವುದಿಲ್ಲ. ಶಾಲೆ ಆರಂಭದ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಮಾಹಿತಿ.

ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ.

ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು.

ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ.

ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ.

— S.Suresh Kumar, Minister - Govt of Karnataka (@nimmasuresh)

ವಿದ್ಯಾರ್ಥಿಗಳ ಅಂತರ ಕಾಯ್ದುಕೊಳ್ಳಲು ಪಾಳಿ ಪದ್ಧತಿಯಲ್ಲಿ  ಅಂದ್ರೆ, ಮೊದಲನೇ ಪಾಳಿ ಸಮಯ ಬೆಳಿಗ್ಗೆ 7.50ರಿಂದ ಮಧ್ಯಾಹ್ನ 12.20ರವರೆಗೆ ಮೊದಲ ಬ್ಯಾಚ್. ನಂತರ ಎರಡನೇ ಪಾಳಿಯನ್ನು ಮಧ್ಯಾಹ್ನ 12.10ರಿಂದ ಸಂಜೆ 5.00 ಗಂಟೆಯವರೆಗೆ ತರಗತಿ ನಡೆಸಲು ನಿರ್ಧಿರಿಸಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಆದ್ರೆ, ಈ ತರಹದ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ಗೊಂದಲಕ್ಕೊಳಗಾಗಬಾರದು.

click me!