ಎಸ್‌ಎಸ್‌ಎಲ್‌ಸಿ SC/STವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

By Suvarna News  |  First Published Aug 9, 2020, 3:25 PM IST

ಕೊರೋನಾ ಮಧ್ಯೆಯೇ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದು, ಇದೀಗ ಅವರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್ ಕೊಟ್ಟಿದೆ.


ಬೆಂಗಳೂರು, (ಆ.09) : 2020-21ನೇ ಸಾಲಿನ ಅಯವ್ಯಯ ಘೋಷಣೆಯಂತೆ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. 

SSLC ಫಲಿತಾಂಶ: ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?

Tap to resize

Latest Videos

ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಸಿ ಕುಮಾರ ಅವರು s ಹೊರಡಿಸಿದ್ದು, ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ ನಗದು ಪ್ರಶಸ್ತಿಯನ್ನು ನೀಡಲು, ಈ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ 60 ಲಕ್ಷ ರೂ ಗಳನ್ನು ಸಮಾಜ ಕಲ್ಯಾಣ ಇಲಾಖೆಗೆ ನಿಗದಿಪಡಿಸಲಾಗಿದೆ ಎಂದು 2020-21ನೇ ಸಾಲಿನ ಅಯವ್ಯಯ ಘೋಷಣೆಯ ಕಂಡಿಕೆ-85ರಲ್ಲಿ ಘೋಷಿಸಲಾಗಿದೆ.

ಈ ಯೋಜನೆಯ ಅನುಷ್ಟಾನಕ್ಕಾಗಿ 60 ಲಕ್ಷಗಳನ್ನು ನಿಗಧಿ ಪಡಿಸಲಾಗಿದೆ. ಹೀಗಾಗಿ 2020-21ನೇ ಸಾಲಿನ ಅಯವ್ಯಯ ಘೋಷಣೆಯಲ್ಲಿ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 1 ಲಕ್ಷ ನಗದು ಪ್ರಶಸ್ತಿ ನೀಡಲು ಮಂಜೂರಾತಿ ನೀಡಿ ಆದೇಶಿಸಿದ್ದಾರೆ. 

click me!