ಕಾಮೆಡ್-ಕೆ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾ: ನಿಗದಿಯಂತೆ ಪರೀಕ್ಷೆ ಬರೆಯಲು ಸಜ್ಜಾಗಿ

Published : Aug 13, 2020, 08:36 PM IST
ಕಾಮೆಡ್-ಕೆ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾ: ನಿಗದಿಯಂತೆ ಪರೀಕ್ಷೆ ಬರೆಯಲು ಸಜ್ಜಾಗಿ

ಸಾರಾಂಶ

ಕಾಮೆಡ್ -ಕೆ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ನಿಗದಿಯಂತೆ ಪರೀಕ್ಷೆ ನಡೆಯಲಿದೆ.

ಬೆಂಗಳೂರು, (ಆ.13): ರಾಜ್ಯ ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜ್ ಗಳ ಒಕ್ಕೂಟದ ಕಾಮೆಡ್ -ಕೆ ಪರೀಕ್ಷೆ ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ನಿಗದಿಯಂತೆ ಆಗಸ್ಟ್ 19 ರಂದು ಕಾಮೆಡ್ -ಕೆ ಪರೀಕ್ಷೆ ನಡೆಯಲಿದೆ. ಕಾಮೆಡ್-ಕೆ ಪರೀಕ್ಷೆ ಮುಂದೂಡಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಮುಂದೂಡಲಾಗಿದ್ದ ಕಾಮೆಡ್ -ಕೆ ಪರೀಕ್ಷೆಗೆ ಹೊಸ ದಿನಾಂಕ ಪ್ರಕಟ

ಈ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸುವಂತೆ ಸೂಚಿಸಿದೆ.  ಈ ಮೂಲಕ ಕಾಮೆಡ್-ಕೆ ಪರೀಕ್ಷೆ ಮುಂದೂಡಲು ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ತಳ್ಳಿಹಾಕಿದೆ.

2020 ರ ಆಗಸ್ಟ್ 19 ರಂದು ನಡೆಯಲಿರುವ ಕಾಮೆಡ್-ಕೆ ಪರೀಕ್ಷೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್,  ಕೋವಿಡ್ -19 ರ ಕಾರಣದಿಂದಾಗಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯನ್ನು ನಡೆಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ