ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ.. ನೋಡುವುದು ಹೇಗೆ?

By Web DeskFirst Published Jul 4, 2019, 11:29 PM IST
Highlights

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶುಕ್ರವಾರ ಆಯಾ ಕಾಲೇಜಿನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಬೆಂಗಳೂರು[ಜು. 04]  ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಒಟ್ಟಾರೆ ಶೇ 30.4ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ಜೂನ್‌ 11ರಿಂದ 20ರವರೆಗೆ 302 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆದಿತ್ತು. ಜೂ. 24 ರಿಂದ ಜುಲೈ 2ರವರೆಗೆ ಬೆಂಗಳೂರಿನ 12 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನ ಮಾಡಲಾಗಿತ್ತು. ಈ ಬಾರಿ 2,30,165 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 69,148 ಮಂದಿ ಅಂದರೆ ಶೇ 30.4 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಲಾಗಿನ್‌ ಆಗಿ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ. 

ಶುಕ್ರವಾರ ಬೆಳಗ್ಗೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟ ಮಾಡಲಾಗುತ್ತದೆ.  ಆನ್ ಲೈನ್ ನಲ್ಲಿ ಫಲಿತಾಂಶ ಲಭ್ಯವಿದ್ದು  ಹಾಗೂ www.pue.kar.nic.in ವೀಕ್ಷಿಸಬಹುದು. 

click me!