Breaking: ಕರ್ನಾಟಕದ SSLC, PUC ಪರೀಕ್ಷೆ ದಿನಾಂಕ ಘೋಷಣೆ

By Suvarna News  |  First Published May 18, 2020, 3:16 PM IST

ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಒಂದು ವಿಷಯದ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ.


ಬೆಂಗಳೂರು, (ಮೇ.18): ರಾಜ್ಯದ ಎಸ್‌ಎಸ್‌ಎಲ್‌ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಘೋಷಣೆಯಾಗಿದೆ.

"

Latest Videos

undefined

ಇದೇ ಜೂನ್ 25ರಿಂದ ಜುಲೈ  4ರ ವರಗೆ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಗಳು ನಡೆಯಲಿವೆ. ಇನ್ನು ಪಿಯುಸಿಯ ಇಂಗ್ಲಿಷ್ ಬಾಷಾ ಪರೀಕ್ಷೆ ಬಾಕಿ ಇದ್ದು, ಅದನ್ನು. ಜೂನ್ 18ರಂದು ನಡೆಸಲಾಗುತ್ತದೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದರು.

ಲಾಕ್‌ಡೌನ್ 4.0 ಗೈಡ್‌ಲೈನ್ಸ್ ಪ್ರಕಟ; ನಿಯಮ- ನಿರ್ಬಂಧಗಳು ಹೀಗಿವೆ ನೋಡಿ

ಈ ಬಗ್ಗೆ ಇಂದು (ಸೋಮವಾರ) ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್, ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ.

ಎಸ್‌ಎಸ್‌ಎಲ್‌ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು.

ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಿದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ. ಇನ್ನು ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು, ಇದಕ್ಕಾಗಿ ರಾಜ್ಯ ಸ್ಕೌಟ್ ಮತ್ತು ಗೈಡ್ಸ್ ನ ಸಹಾಯ ದೊರೆಯಲಿದೆ. ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

 ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

click me!