ಮಧ್ಯಾಹ್ನ 3ಕ್ಕೆ SSLC ಫಲಿತಾಂಶ ಪ್ರಕಟ!

Published : Aug 10, 2020, 08:46 AM ISTUpdated : Aug 10, 2020, 10:25 AM IST
ಮಧ್ಯಾಹ್ನ 3ಕ್ಕೆ SSLC ಫಲಿತಾಂಶ ಪ್ರಕಟ!

ಸಾರಾಂಶ

ಇಂದು ಮಧ್ಯಾಹ್ನ 3ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ| ಕೊರೋನಾ ನಡುವೆಯೂ ನಡೆದಿದ್ದ ಪರೀಕ್ಷೆ

 ಬೆಂಗಳೂರು(ಆ.10): ಕೊರೋನಾ ಆತಂಕದ ನಡುವೆಯೂ ಯಶಸ್ವಿಯಾಗಿ ನಡೆದ 2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಳ್ಳಲಿದೆ.

ಎಸ್‌ಎಸ್‌ಎಲ್‌ಸಿ SC/STವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿ ವೆಬ್‌ಸೈಟ್‌ http://www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಮೊಬೈಲ್‌ ಸಂಖ್ಯೆಗೆ ಫಲಿತಾಂಶ ರವಾನೆಯಾಗಲಿದೆ.

SSLC ಪರೀಕ್ಷೆ ಬರೆದ, ಬರೆಯದ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಜೂ.25ರಿಂದ ಜು.4ರವರೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸುಮಾರು 8.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಶೇ.98ರಷ್ಟುವಿದ್ಯಾರ್ಥಿಗಳು ಹಾಜರಾಗಿದ್ದರು. ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯಾವುದೇ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗದ ರೀತಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸರ್ಕಾರದ ಈ ನಿರ್ಧಾರ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿತ್ತು.

PREV
click me!

Recommended Stories

20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?
ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!