ಕೊರೋನಾದಿಂದ ಮುಂದೂಡಿಕೆಯಾಗಿದ್ದ TET ಪರೀಕ್ಷಾ ದಿನಾಂಕ ಪ್ರಕಟ

Published : May 20, 2020, 08:19 PM IST
ಕೊರೋನಾದಿಂದ ಮುಂದೂಡಿಕೆಯಾಗಿದ್ದ TET ಪರೀಕ್ಷಾ ದಿನಾಂಕ ಪ್ರಕಟ

ಸಾರಾಂಶ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ದಿನಾಂಕ ನಿಗದಿ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಪ್ರಕಟಿಸಿದೆ.

ಬೆಂಗಳೂರು, (ಮೇ.20): ಕೊರೋನಾದಿಂದ ಮುಂದೂಡಲ್ಪಟ್ಟಿದ್ದ ಟಿಇಟಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2020 (ಟಿಇಟಿ) ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. 

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಇಂದು (ಬುಧವಾರ) ಸುದ್ದಿಗೋಷ್ಠಿ ನಡೆಸಿ ಪರೀಕ್ಷೆ ಪ್ರಕಟಿಸಿದ್ದು, ಜುಲೈ 5ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಶಿಕ್ಷಕರ ಟಿಇಟಿ ಪರೀಕ್ಷೆ ತೊಡಕುಗಳ ಪರಿಹಾರಕ್ಕೆ ಚಿಂತನೆ

ಕೊರೋನಾ ಲಾಕ್‌ಡೌನ್ ಪರಿಣಾಮ ಟಿಇಟಿ ಸೇರಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 03ರ ವರೆಗೆ ನಿರ್ಧರಿಸಲಾಗಿದ್ದು, ವೇಳಾಪಟ್ಟಿ ಸಹ ಪ್ರಕಟಿಸಲಾಗಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ