ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇರ (ನೇಮಕಾತಿ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಮತ್ತು 2015ರ ತಿದ್ದುಪಡಿ ನಿಯಮಗಳ ಅನ್ವಯ ಉಳಿಕೆ ಮೂಲ ವೃಂದದ ಗ್ರೂಪ್ 'ಎ' ಮತ್ತು 'ಬಿ' ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದೆ.
ಬೆಂಗಳೂರು, (ಡಿ.07): ಕರ್ನಾಟಕ ಲೋಕಸೇವಾ ಆಯೋಗ ಒಟ್ಟು 381 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ನೇರ (ನೇಮಕಾತಿ ಆಯ್ಕೆ) (ಸಾಮಾನ್ಯ) ನಿಯಮಗಳು 2006 ಮತ್ತು 2015ರ ತಿದ್ದುಪಡಿ ನಿಯಮಗಳ ಅನ್ವಯ ಉಳಿಕೆ ಮೂಲ ವೃಂದದ ಗ್ರೂಪ್ 'ಎ' ಮತ್ತು 'ಬಿ' ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದ್ದು, ಅರ್ಜಿಗಳನ್ನು ಸಲ್ಲಿಸಲು 16/01/2019 ಕೊನೆಯ ದಿನವಾಗಿದೆ.
ಗ್ರೂಪ್ 'ಎ' ಹುದ್ದೆಗಳು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 8, ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮಾ ವೈದ್ಯಾಧಿಕಾರಿ 143 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇನ್ನು ಗ್ರೂಪ್ 'ಬಿ' ಹುದ್ದೆಗಳಲ್ಲಿ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿ 221, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರು/ ಸಹಾಯಕ ನಿರ್ದೇಶಕರು 09 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಶುಲ್ಕ ವಿವರ: ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಇನ್ನು ಹಿಂದೂಳಿದ ವರ್ಗ 2ಎ, 2ಬಿ, 3ಎ ಮತ್ತು ಬಿ3 ಅಭ್ಯರ್ಥಿಗಳಿಗೆ 300 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಪ್ರವರ್ಗ1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 50 ರೂ ನಿಗದಿಪಡಿಸಲಾಗಿದೆ.
ಪಾವತಿಸಲು ಕೊನೆ ದಿನಾಂಕ 17-01-2019. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ಕಚೇರಿ ವೆಬ್ ಸೈಟ್ ನಲ್ಲಿ ತಿಳಿಯಲು