ಕರ್ನಾಟದ ಕಾನೂನು ವಿಶ್ವವಿದ್ಯಾಲಯದ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದು ಮಾಡುವುದು ಸೂಕ್ತ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.
ಬೆಂಗಳೂರು, (ಆ.23): ರಾಜ್ಯ ಕಾನೂನು ವಿಶ್ವ ವಿದ್ಯಾಲಯ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಕೈಬಿಡುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಈಗಾಗಲೇ ಕೋವಿಡ್ ಸೋಂಕಿನಿಂದಾಗಿ ಬೋಧನಾ ತರಗತಿಗಳು ನಡೆಯದೆ ಅರ್ಧದಷ್ಟೂ ಪಠ್ಯಕ್ರಮಗಳು ಪೂರ್ಣಗೊಂಡಿಲ್ಲ. ಹಾಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ನಡೆಸದಿರುವುದು ಸೂಕ್ತ ಎಂದು ಸರ್ಕಾರಕ್ಕೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಸ್ಥಳೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರೀಕ್ಷೆಯ ನಿರ್ಧಾರ ಕೈಗೊಳ್ಳುವಂತೆ ಯುಜಿಸಿ ತಿಳಿಸಿದೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಉಲ್ಭಣಿಸುತ್ತಿರುವಾಗ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪ್ರತಿಷ್ಠೆಗೆ ಅಂಟಿಕೊಳ್ಳದೆ ಸೆಮಿಸ್ಟರ್ ಪರೀಕ್ಷೆ ಕೈಬಿಡುವುದು ಒಳಿತು.
2/3 pic.twitter.com/Lb7FTwwccd
ಸ್ಥಳೀಯ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಪರಿಕ್ಷೆಯ ನಿರ್ಧಾರ ಕೈಗೊಳ್ಳುವಂತೆ ಯುಜಿಸಿ ತಿಳಿಸಿತ್ತು, ಆದರೆ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಉಲ್ಭಣಿಸುತ್ತಿರುವಾಗ ರಾಜ್ಯ ಕಾನೂನು ವಿಶ್ವವಿದ್ಯಾಲಯ ಪ್ರತಿಷ್ಠೆಗೆ ಅಂಟಿಕೊಳ್ಳಬಾರದು ಎಂದು ಹೇಳಿದ್ದಾರೆ.
ಕೋವಿಡ್ ಸೋಂಕಿನಿಂದಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸುವುದು ಸೂಕ್ತವಲ್ಲದ ಕಾರಣ ಕಾನೂನು ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಅವರಿಗೆ ಅನುಕೂಲಕರವಾದ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆಗೆ ಹಾಜರಾಗಲು ಕಾನೂನು ವಿಶ್ವವಿದ್ಯಾಲಯ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.