ಆ.10 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್‌

By Suvarna NewsFirst Published Aug 7, 2020, 1:04 PM IST
Highlights

ಮೌಲ್ಯಮಾಪನ, ತಾಂತ್ರಿಕ ಕೆಲಸಗಳು ಪೂರ್ಣ| ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ SMS ಮೂಲಕ ಫಲಿತಾಂಶ| ಪರೀಕ್ಷೆಗೆ 8.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು|  ಈ ಪೈಕಿ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು|

ಬೆಂಗಳೂರು(ಆ.07):  ಕಳೆದ ಜೂನ್‌ 25ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸೋಮವಾರ(ಆ.10) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರು ಹೇಳಿದ್ದಾರೆ.

"

ಸಾಮಾಜಿಕ ಜಾತಲಾಣ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಚಿವರು, ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಕೂಡ ಸುಸೂತ್ರವಾಗಿ ಮುಗಿದಿದೆ. ತಾಂತ್ರಿಕ ಕೆಲಸಗಳು ಕೂಡ ಮುಗಿದಿವೆ. ಹೀಗಾಗಿ ಆ.10 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

SSLC ಫಲಿತಾಂಶ: ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?

 

ಪಿಯು ಫಲಿತಾಂಶವನ್ನ ವಿದ್ಯಾರ್ಥಿಗಳ ಮೊಬೈಲ್ ಗೆ ಕಳುಹಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಕೂಡ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ SMS ಮೂಲಕ ಫಲಿತಾಂಶ ಸಿಗಲಿದೆ. ಪರೀಕ್ಷೆಗೆ 8.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೊರೋನಾ ಸೋಂಕು ನಡುವೆಯೂ ಸವಾಲಾಗಿ ಸ್ವೀಕರಿಸಿ ರಾಜ್ಯ ಸರ್ಕಾರ ದೇಶದಲ್ಲಿಯೇ ಮಾದರಿಯಾಗಿ ಹಾಗೂ ಯಶಸ್ವಿಯಾಗಿ ಪರೀಕ್ಷೆ ನಡೆಸಿತ್ತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಶ್ರಮ ವಹಿಸಿ ಕ್ರಮ ಕೈಗೊಂಡಿದ್ದರು.
 

click me!