SSLC ಪರೀಕ್ಷೆ: ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸಚಿವ ಸುರೇಶ್ ಕುಮಾರ್ ಪತ್ರ..!

By Suvarna News  |  First Published May 28, 2020, 8:32 PM IST

ಕರ್ನಾಟಕ ಹೈಕೋರ್ಟ್‌ನಿಂದ ಸೂಚನೆ ಬಂದಿದ್ದೇ ತಡ ಸಚಿವ ಸುರೇಶ್ ಕುಮಾರ್ ಅವರು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬಗ್ಗೆ ಪತ್ರವೊಂದು ಬರೆದಿದ್ದಾರೆ. ಆ ಪತ್ರದಲ್ಲೇನಿದೆ..? 


ಬೆಂಗಳೂರು, (ಮೇ.28): ಒಂದು ಕಡೆ ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಿದೆ. ಇದರ ಮದ್ಯೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದೇ ರಾಜ್ಯ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ.

ಸ್ವಲ್ಪ ಏನಾದರೂ ಹೆಚ್ಚು ಕಮ್ಮಿ ಆದ್ರೆ ಸರ್ಕಾರ ಹೊಣೆ ಹೊತ್ತುಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆ ಪರೀಕ್ಷೆ ಸಂಬಂಧ ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮತ್ತಷ್ಟು ಕಟ್ಟುನಿಟ್ಟಿನ ಕ್ರಮದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ.

Latest Videos

undefined

SSLC ಪರೀಕ್ಷೆ ರದ್ದತಿಗೆ ಪಿಐಎಲ್: ಹೈಕೋರ್ಟ್ ಕೋರ್ಟ್ ಹೇಳಿದಿಷ್ಟು..?

ಸುರೇಶ್  ಕುಮಾರ್ ಬರೆದ ಪತ್ರ...
ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ  ಪತ್ರ ಬರೆದು ಮನವಿ ಮಾಡಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸಚಿವರು, ಪರೀಕ್ಷೆಯನ್ನು ಅತ್ಯಂತ  ಸುರಕ್ಷಿತವಾಗಿ ಹಾಗೂ ಮಕ್ಕಳ ಶ್ರೇಯಸ್ಸಿಗೆ ಪೂರಕವಾಗಿ ನಡೆಯಲು ಎಲ್ಲ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಸಾಮರ್ಥ್ಯದ ಓರೆಗಲ್ಲಾಗಿರುವ ಈ ಬಾರಿಯ ಪರೀಕ್ಷೆಯನ್ನು ಸುಗಮವಾಗಿ ನಿರ್ವಹಣೆ ಮಾಡಲು ತಾವು ಸಹಕರಿಸಬೇಕು  ಎಂದು ಕೋರಿದ್ದಾರೆ.

ಕರ್ನಾಟಕ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳ ನಡುವೆ ವೈಕ್ತಿಗತ ಅಂತರ ಕಾಪಾಡುವುದು ಸೇರಿದಂತೆ ಇಲಾಖೆ ಕೈಗೊಂಡಿರುವ ಉಪಕ್ರಮಗಳನ್ನು ಪಾಲಿಸಿ ಎಲ್ಲ ರೀತಿಯ ಸಹಾಯ-ಸಹಕಾರ ನೀಡಬೇಕು. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್  ಸೇರಿದಂತೆ ಬಹುತೇಕ ಸಂಘ ಸಂಸ್ಥೆಗಳು ಸರ್ಕಾರದ ಜತೆ ಕೈ ಜೋಡಿಸಿವೆ. ಪರೀಕ್ಷೆ ಸಂದರ್ಭದಲ್ಲಿ ಅನಾರೋಗ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು.

ಇದರಿಂದ ಇತರೆ ವಿದ್ಯಾರ್ಥಿಗಳ ಹಿತ ರಕ್ಷಣೆ ಸಾಧ್ಯವಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ  ತಪಾಸಣೆಗಾಗಿ ಸೂಕ್ತ ವ್ಯವಸ್ಥೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರನ್ನು ಭೇಟಿ ಮಾಡಿ ಪರೀಕ್ಷೆ ಕುರಿತು ಆತ್ಮ ವಿಶ್ವಾಸ ತುಂಬಬೇಕು ಎಂದು ಮನವಿ ಮಾಡಿದ್ದಾರೆ. 

ಪಿಯುಸಿ ಪರೀಕ್ಷೆ ಬಗ್ಗೆ ಮತ್ತೊಂದು ಪತ್ರ
 ಪಿಯುಸಿ ಇಂಗ್ಲೀಷ್ ಪತ್ರಿಕೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಎಲ್ಲಾ ಉಪ್ಯಾಸಕರು ಪಾಲ್ಗೊಳ್ಳಬೇಕು ಎಂದು ಮತ್ತೊಂದು ಪತ್ರ ಬರೆದಿದ್ದಾರೆ. 

ಇದೇ ಸಂದರ್ಭದಲ್ಲಿ ಉಪನ್ಯಾಸಕ ಸಮುದಾಯಕ್ಕೆ ಮತ್ತೊಂದು ಪತ್ರ ಬರೆದಿರುವ ಸುರೇಶ್ ಕುಮಾರ್, ಪಿಯುಸಿ ಇಂಗ್ಲಿಷ್ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಬಾಕಿ ಉಳಿದಿರುವ ಇಂಗ್ಲೀಷ್ ಪತ್ರಿಕೆಯ ಉತ್ತರ  ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುವುದು. ಹಾಗೆಯೇ ಮೌಲ್ಯಮಾಪಕರ ಹಿತವನ್ನೂ ಕಾಯಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

ಹೈಕೋರ್ಟ್ ಹೇಳಿದ್ದೇನು..

ಪರೀಕ್ಷೆ ನಡೆಸದಂತೆ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಅತ್ಯಂತ ಕಟ್ಟುನಿಟ್ಟಾಗಿ, ಯಾವ ವಿದ್ಯಾರ್ಥಿಗೂ ತೊಂದರೆಯಾಗದಂತೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.ಇನ್ನು ಬಾಕಿ ಇರುವ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ತೀರ್ಮಾನಿಸಲಾಗಿದೆ.

click me!