ಮೋದಿ ಸರ್ಕಾರದ ಭರ್ಜರಿ ಕೊಡುಗೆ: 5 ಕೋಟಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌

Published : Jun 12, 2019, 08:20 AM IST
ಮೋದಿ ಸರ್ಕಾರದ ಭರ್ಜರಿ ಕೊಡುಗೆ: 5 ಕೋಟಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌

ಸಾರಾಂಶ

5 ಕೋಟಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರ ಸ್ಕಾಲರ್‌ಶಿಪ್‌| ಅಲ್ಪಸಂಖ್ಯಾತ ವರ್ಗದ ಅಭ್ಯುದಯಕ್ಕಾಗಿ 3ಇ ಅಳವಡಿಕೆ| 3ಇ ಅಂದರೆ ಶಿಕ್ಷಣ, ಉದ್ಯೋಗ, ಸಬಲೀಕರಣ ಎಂದರ್ಥ| ಮದ್ರಸಾಗಳಲ್ಲೂ ಇನ್ನು ಮುಂದಿನ ದಿನಗಳಲ್ಲಿ ಸಾಮಾನ್ಯ ಶಿಕ್ಷಣ

ನವದೆಹಲಿ[ಜೂ.12]: ಸಬ್‌ಕಾ ಸಾಥ್‌ ಸಬ್‌ಕಾ ವಿಕಾಸ್‌ ಘೋಷ ವಾಕ್ಯದ ಮೂಲಕ ಮತ್ತೆ ಮರಳಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದರ ಸಾಕಾರಕ್ಕಾಗಿ ಮುಂದಿನ 5 ವರ್ಷಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ 5 ಕೋಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಣೆ ಮಾಡಿದೆ.

ಈ ಬಗ್ಗೆ ಮಂಗಳವಾರ ಮಾತನಾಡಿದ ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಅವರು, ‘ಅಲ್ಪಸಂಖ್ಯಾತ ಸಮುದಾಯ ಮುಖ್ಯವಾಗಿ ಬಾಲಕಿಯರ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣದ ಸಬಲೀಕರಣಕ್ಕಾಗಿ ‘3ಇ’(ಶಿಕ್ಷಣ, ಉದ್ಯೋಗ ಹಾಗೂ ಸಬಲೀಕರಣ)ಗಳನ್ನು ಅಳವಡಿಸಿಕೊಳ್ಳಲಾಗಿದೆ. ಈ ಪ್ರಕಾರವಾಗಿ ಪ್ರೀ ಮೆಟ್ರಿಕ್‌(ಪ್ರೌಢಶಾಲೆ) ಪೋಸ್ಟ್‌ ಮೆಟ್ರಿಕ್‌(ಪಿಯುಸಿ), ವೃತ್ತಿ ಪರ ಹಾಗೂ ತಾಂತ್ರಿಕ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ 5 ಕೋಟಿ ವಿದ್ಯಾರ್ಥಿಗಳಿಗೆ 5 ವರ್ಷಗಳಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ’ ಎಂದು ತಿಳಿಸಿದರು. ಅಲ್ಲದೆ, ಇದರಲ್ಲಿ ಶೇ.50ರಷ್ಟುಮಹಿಳಾ ವಿದ್ಯಾರ್ಥಿಗಳು ಸೇರಿಕೊಂಡಿರಲಿದ್ದಾರೆ ಎಂದು ಹೇಳಿದ್ದಾರೆ.

ಈ ವಿದ್ಯಾರ್ಥಿ ವೇತನದ ಮೂಲಕ ಮೋದಿ ಸರ್ಕಾರವು ಎಲ್ಲರನ್ನೂ ಒಳಗೊಂಡ ಆರೋಗ್ಯಕರ ಅಭಿವೃದ್ಧಿ ಹಾಗೂ ಕೋಮು ದ್ವೇಷ ಹಾಗೂ ಓಲೈಕೆ ರಾಜಕಾರಣದ ರೋಗವನ್ನು ಪರಿಹರಿಸಲು ಯತ್ನಿಸುತ್ತಿದೆ ಎಂದು ನಖ್ವಿ ಪ್ರತಿಪಾದಿಸಿದರು.

ಅಲ್ಲದೆ, ಮದ್ರಸಾಗಳಲ್ಲಿ ಪಾಠ ಮಾಡುವ ಶಿಕ್ಷಕರಿಗೆ ಹಿಂದಿ, ಇಂಗ್ಲಿಷ್‌, ಗಣಿತ, ವಿಜ್ಞಾನ ಹಾಗೂ ಕಂಪ್ಯೂಟರ್‌ ಕುರಿತಾದ ತರಬೇತು ನೀಡಲಾಗುತ್ತದೆ. ಈ ಮೂಲಕ ಮದ್ರಸಾ ವಿದ್ಯಾರ್ಥಿಗಳು ಸಹ ಇತರ ವಿದ್ಯಾರ್ಥಿಗಳಂತೆ ಹಲವು ವಿಷಯಗಳಲ್ಲಿ ಪರಿಣತಿ ಸಾಧಿಸಲು ಅನುಕೂಲಕರವಾಗುತ್ತದೆ. ಅಲ್ಲದೆ, ಪ್ರಧಾನಮಂತ್ರಿ ಜನ ವಿಕಾಸ್‌ ಕಾರ್ಯಕ್ರಮದಡಿ ದೇಶಾದ್ಯಂತ ಶಾಲೆಗಳು, ಕಾಲೇಜುಗಳು, ಐಟಿಐಗಳು, ಪಾಲಿಟೆಕ್ನಿಕ್‌ಗಳು, ಬಾಲಕಿಯರ ಹಾಸ್ಟೆಲ್‌ಗಳು, ಗುರುಕುಲ ರೀತಿಯ ವಸತಿ ಶಾಲೆಗಳನ್ನು ಕ್ಷಿಪ್ರಗತಿಯಲ್ಲಿ ನಿರ್ಮಿಸಲಾಗುತ್ತದೆ ಎಂದಿದ್ದಾರೆ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ