ನೀಟ್, ಜೆಇಇ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ: ಪರೀಕ್ಷೆಗಳು ನಡೆಯಲಿವೆ ಯಥಾ ಪ್ರಕಾರ

By Suvarna NewsFirst Published Aug 17, 2020, 2:28 PM IST
Highlights

ನೀಟ್‌, ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ.

ನವದೆಹಲಿ, (ಆ.17):  ಕೊರೋನಾ ವೈರಸ್‌ ಪರಿಣಾಮ ನೀಟ್‌, ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. 

ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರಮಟ್ಟದಲ್ಲಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗಳು (ನೀಟ್‌) ನಿಗದಿತ ದಿನಗಳಂದು ನಡೆಯಲಿವೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದೆ.

ಕಾಮೆಡ್-ಕೆ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾ: ನಿಗದಿಯಂತೆ ಪರೀಕ್ಷೆ ಬರೆಯಲು ಸಜ್ಜಾಗಿ

ಪರೀಕ್ಷೆ ಮುಂದೂಡುವಂತೆ 11 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಪರೀಕ್ಷೆ ಮುಂದೂಡಲು ನಿರಾಕರಿಸಿದೆ.

ನಿಗದಿಯಂತೆ ಸೆಪ್ಟೆಂಬರ್‌ ತಿಂಗಳಲ್ಲಿ ನೀಟ್‌, ಜೆಇಇ ಪರೀಕ್ಷೆಗಳು ನಡೆಯಲಿವೆ ಎಂದು ತ್ರಿಸದಸ್ಯ ಪೀಠ ತಿಳಿಸಿದೆ. ಯುವ ಜನರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ಮೂಲಕ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಸೆಪ್ಟೆಂಬರ್ 1ರಿಂದ 6ರವರೆಗೂ ಹಾಗೂ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆ ಸೆಪ್ಟೆಂಬರ್ 13ಕ್ಕೆ ನಿಗದಿಯಾಗಿದ್ದು, ಇದೇ ದಿನಾಂಕದಂದು ಪರೀಕ್ಷೆಗಳು ನಡೆಯಲಿವೆ. 

ಡಿಸ್ಟಿಂಕ್ಷನ್ ಬಂದ್ರೂ ಬೆಂಗಳೂರಿನ ಕಾಲೇಜಲ್ಲಿ ಸೀಟ್ ಇಲ್ಲ!

"

click me!