ಎನ್‌ಇಟಿ, ನೀಟ್, ಜೆಇಇ ಪರೀಕ್ಷೆ ಜವಾಬ್ದಾರಿ ಎನ್‌ಟಿಎ ಹೆಗಲಿಗೆ!

First Published Jul 7, 2018, 7:34 PM IST
Highlights

ಎನ್‍ಟಿಎ ದಿಂದ ಎನ್‌ಇಟಿ, ನೀಟ್, ಜೆಇಇ ಪರೀಕ್ಷೆ

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ

ಅಂತರಾಷ್ಟ್ರೀಯ ಮಾನದಂಡ ಅನುಸರಿಸಿ ಪರೀಕ್ಷೆ

ಸಂಪೂರ್ಣ ಕಂಪ್ಯೂಟರ್ ಆಧಾರಿತ ಪರೀಕ್ಷೆ 
 

ನವದೆಹಲಿ(ಜು.7): ವಿವಿಧ ಪ್ರವೇಶ ಪರೀಕ್ಷೆಗಳಿಗಾಗಿಯೇ ರಚಿಸಲಾಗಿರುವ ನೂತನ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ-ಎನ್‍ಟಿಎ) ಎನ್‌ಇಟಿ, ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಇದುವರೆಗೆ ಎನ್‌ಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳನ್ನು ಸಿಬಿಎಎಸ್‌ಇ ನಡೆಸುತ್ತಿತ್ತು. ಇನ್ನು ಮುಂದೆ ಈ ಪರೀಕ್ಷೆಗಳನ್ನು ಎನ್‌ಟಿಎ ನಡೆಸಲಿದೆ ಎಂದು ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ. ಎನ್‌ಇಟಿ ಡಿಸೆಂಬರ್ ನಲ್ಲಿ ಮತ್ತು ಜೆಇಇ ವರ್ಷದಲ್ಲಿ ಎರಡು ಬಾರಿ ಅಂದರೆ, ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಎನ್‌ಟಿಎ ಅಂತರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸಿ ಅತ್ಯಂತ ಸುರಕ್ಷಿತವಾಗಿ ಈ ಪರೀಕ್ಷೆಗಳನ್ನು ನಡೆಸಲಿದೆ. ಇನ್ನು ಮುಂದೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದಿಲ್ಲ ಮತ್ತು ಇದು ವಿದ್ಯಾರ್ಥಿ ಸ್ನೇಹಿಯಾಗಿದೆ ಎಂದು ಜಾವಡೇಕರ್ ಭರವಸೆ ನೀಡಿದ್ದಾರೆ.

ಪರೀಕ್ಷೆಗಳು ಸಂಪೂರ್ಣ ಕಂಪ್ಯೂಟರ್ ಆಧಾರಿತವಾಗಿದ್ದು, ವಿದ್ಯಾರ್ಥಿಗಳು ತಮಗೆ ಅನುಕೂಲವಾದ ದಿನಾಂಕವನ್ನು ಆಯ್ಕೆ ಮಾಡಿಕೊಂಡು ಕಂಪ್ಯೂಟರ್ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
 

click me!