ಕೊರೋನಾ ಲಾಕ್‌ಡೌನ್‌ನಿಂದಾಗಿ 1ರಿಂದ 9 ಕ್ಲಾಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಬಡ್ತಿ ನೀಡಲಾಗಿದೆ. ಆದ್ರೆ. ಇದೀಗ ಎಸ್‌ಎಸ್‌ಎಲ್‌ಸಿ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸುವುದು ಅನಿರ್ವಾವಾಗಿದ್ದು, ಈ ಬಗ್ಗೆ ಕೇಂದ್ರ ಸಚಿವಾಲಯ ಮಹತ್ವದ ಮಾಹಿತಿಯೊಂದನ್ನ ನೀಡಿದೆ.
ನವದೆಹಲಿ, (ಏ.29): ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಬಾಕಿ ಉಳಿದಿರುವ 10 ಮತ್ತು 12ನೇ ತರಗತಿಯ 29 ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಿದ್ದತೆ ಮಾಡಿಕೊಂಡಿದೆ.
ಈಗಾಗಲೇ ನಡೆಸಿರುವ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಸಹ ಆರಂಭಿಸುವಂತೆ ರಾಜ್ಯ ಸರ್ಕಾರಗಳಿಗೆ ಆದೇಶಿಸಿರುವ ಸಚಿವಾಲಯ, ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಸಿಬಿಎಸ್ಇಯನ್ನು ಒದಗಿಸಲು ಮುಂದಾಗಿದೆ.
ಖ್ಯಾತ ನಟ ಇರ್ಫಾನ್ ಖಾನ್ ನಿಧನ; ಭಾರತದಲ್ಲಿ ಆತಂಕ ಹೆಚ್ಚಿಸಿದ ಕೊರೋನಾ; ಏ.29ರ ಟಾಪ್ 10 ಸುದ್ದಿ!
ಪರೀಕ್ಷೆ ಆರಂಭವಾಗುವುದಕ್ಕೆ 10 ದಿನಗಳ ಮೊದಲು ವಿದ್ಯಾರ್ಥಿಗಳಿಗೆ ನೊಟೀಸ್ ಕಳುಹಿಸಲಾಗುವುದು ಎಂದು ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಈ ಮೂಲಕ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳನ್ನು ಅವರು ಪಡೆದ ಇಂಟರ್ನಲ್ ಅಂಕಗಳ ಆಧಾರದ ಮೇಲೆ ಪಾಸ್ ಮಾಡುವ ಗೊಂದಲಗಳಿಗೆ ತೆರೆ ಬಿದ್ದಿದೆ.
ಇನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಖ್ರಿಯಾಲ್, ರಾಜ್ಯಗಳ ಶಿಕ್ಷಣ ಸಚಿವರುಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವಾಲಯದ ಅಧಿಕಾರಿಗಳು ಹೇಳುವ ಪ್ರಕಾರ, ಜೆಇಇ, ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜೂನ್ ತಿಂಗಳಲ್ಲಿ ನಡೆಸುವ ಸಾಧ್ಯತೆಯಿದೆ.
ಲಾಕ್‌ಡೌನ್‌ನಿಂದ ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳು: ಉನ್ನತ ಶಿಕ್ಷಣ ಪರೀಕ್ಷೆ ಹೇಗೆ?
ಇನ್ನು ಕರ್ನಾಕಟಕಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೊಂದನ್ನು ಹೊರತುಪಡಿಸಿ ಉಳಿದೆಲ್ಲಾ ತರಗತಿಗಳ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮೇ ತಿಂಗಳದಲ್ಲಿ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.