ಇನ್ನು ಸರ್ಕಾರಿ ಶಾಲೆಗಳ ಮಕ್ಕಳ ಸಮವಸ್ತ್ರದ ಬಣ್ಣ ರಾಜ್ಯಾದ್ಯಂತ ಒಂದೇ ರೀತಿಯಲ್ಲಿ ಇರದೇ ಬೇರೆ ಬೇರೆಯಾಗಿರುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಬಣ್ಣದ ಆಯ್ಕೆಯನ್ನು (ಈ ಅವಧಿಗೆ ಮಾತ್ರ) ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ (ಎಸ್‌ಡಿಎಂಸಿ) ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು (ಜು. 31): ಇನ್ನು ಸರ್ಕಾರಿ ಶಾಲೆಗಳ ಮಕ್ಕಳ ಸಮವಸ್ತ್ರದ ಬಣ್ಣ ರಾಜ್ಯಾದ್ಯಂತ ಒಂದೇ ರೀತಿಯಲ್ಲಿ ಇರದೇ ಬೇರೆ ಬೇರೆಯಾಗಿರುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಬಣ್ಣದ ಆಯ್ಕೆಯನ್ನು (ಈ ಅವಧಿಗೆ ಮಾತ್ರ) ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ (ಎಸ್‌ಡಿಎಂಸಿ) ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2019-20ನೇ ಸಾಲಿನಲ್ಲಿ ಎರಡನೇ ಜೊತೆ ಸಮವಸ್ತ್ರ ಯೋಜನೆಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು, ಸಮವಸ್ತ್ರ ಮಾತ್ರ ವಿತರಣೆ ಮಾಡಿರಲಿಲ್ಲ. ಆದ್ದರಿಂದ 2020-21ನೇ ಸಾಲಿನ ಆರಂಭದಲ್ಲಿಯೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹೊಲಿಸಿ ವಿತರಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ, ಕೊರೋನಾ ಸೋಂಕು ಹರಡಿರುವುದರಿಂದ ಖರೀದಿ ಪ್ರಕ್ರಿಯೆಯನ್ನು ಇನ್ನೂ ಆರಂಭಿಸಿಲ್ಲ.
undefined
ಇದೇ ವೇಳೆ, ರಾಜ್ಯದ ಎಲ್ಲಾ ಎಸ್‌ಡಿಎಂಸಿಗಳು, ಒಂದೇ ಬಣ್ಣದ ಸಮವಸ್ತ್ರ ವಿತರಣೆ ಮಾಡುವುದು ಕಷ್ಟ. ಆದ್ದರಿಂದ ಸಮವಸ್ತ್ರ ಬಣ್ಣದ ಆಯ್ಕೆಯನ್ನು ತಮಗೆ ನೀಡುವಂತೆ ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಈ ಒಂದು ಅವಧಿಯ ಬಣ್ಣದ ಆಯ್ಕೆಯನ್ನು ಎಸ್‌ಡಿಎಂಸಿಗಳಿಗೆ ನೀಡಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ (ಯೋಜನೆ) ಎಸ್‌ಆರ್‌ಎಸ್ ನಾಧನ್ ಆದೇಶ ಹೊರಡಿಸಿದ್ದಾರೆ.
ಸದ್ಯ ಸರ್ಕಾರಿ ಶಾಲೆಯ ಒಂದರಿಂದ ಹತ್ತನೇ ತರಗತಿ ಗಂಡು ಮಕ್ಕಳಿಗೆ ಕಡು ನೀಲಿ ಬಣ್ಣದ ಪ್ಯಾಂಟ್ ಮತ್ತು ತಿಳಿ ನೀಲಿ ಬಣ್ಣದ ಅಂಗಿ ಹಾಗೂ ಹೆಣ್ಣು ಮಕ್ಕಳಿಗೆ ಕಡು ನೀಲಿ ಬಣ್ಣದ ಪ್ಯಾಂಟ್ ಹಾಗೂ ತಿಳಿ ನೀಲಿ ಬಣ್ಣದ ಚೂಡಿದಾರ್ ಟಾಪ್ ನೀಡಲಾಗುತ್ತಿದೆ. 2020-21ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾದ ನಂತರ ಖರೀದಿ ಪ್ರಕ್ರಿಯೆ ನಡೆಸುವುದು ಮತ್ತು ಬಣ್ಣದ ಆಯ್ಕೆಯನ್ನು ತಾವೇ ನಿರ್ಧರಿಸಿ ಸಮವಸ್ತ್ರ ವಿತರಿಸುವಂತೆ ನಿರ್ದೇಶನ ನೀಡಲಾಗಿದೆ.