ಶಾಲಾ-ಕಾಲೇಜು ಪ್ರಾರಂಭ ಯಾವಾಗ? ದಿನಾಂಕ ಪ್ರಕಟಿಸಿದ ಕೇಂದ್ರ ಸಚಿವ

By Suvarna NewsFirst Published Jun 7, 2020, 3:02 PM IST
Highlights

ಬಹುತೇಕ ಲಾಕ್‌ಡೌನ್ ಸಡಿಲಗೊಳಿಸಿದ್ದು, ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಆದ್ರೆ, ಶಾಲಾ-ಕಾಲೇಜು ಆರಂಭ ಮಾಡಬೇಕು ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ಕೇಂದ್ರ ಸಚಿವರೊಬ್ಬರು ಶಾಲೆ ಪುನರಾರಂಭದ ಬಗ್ಗೆ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

ನವದೆಹಲಿ, (ಜೂನ್.07): ಶಾಲಾ-ಕಾಲೇಜುಗಳನ್ನು ಯಾವಾಗಿನಿಂದ ಆರಂಭಿಸಬೇಕೆನ್ನು ಎನ್ನುವ ಚರ್ಚೆಗಳ ಮಧ್ಯೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಿಗೆ ಸಂದರ್ಶನಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ , ಆಗಸ್ಟ್‌ನಲ್ಲಿ ಶಾಲಾ-ಕಾಲೇಜು ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಸದ್ಯಕ್ಕೆ ಶಾಲೆ ಪುನಾರಂಭಿಸುವ ಯಾವುದೇ ಯೋಚನೆ ಸರ್ಕಾರಕ್ಕಿಲ್ಲ: ಸಚಿವ ಸುರೇಶ್ ಕುಮಾರ್
 
ಈಗಾಗಲೇ ಪ್ರಮುಖ ಪರೀಕ್ಷೆಗಳು ಶುರುವಾಗಿದ್ದು, ಜುಲೈನಲ್ಲಿ ಅಂತ್ಯವಾಗಲಿವೆ. ಇದೀಗ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಿ ಆಗಸ್ಟ್ 15ರ ನಂತರ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸಲು ಯೋಚನೆ ಇದೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಶಾಲೆ ಯಾವಾಗ ಆರಂಭವಾಗುತ್ತವೆ? ಎನ್ನುವ ವಿದ್ಯಾರ್ಥಿ ಹಾಗೂ ಪೋಷಕರ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.

ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡೂವರೆ ತಿಂಗಳಿಗೂ ಲಾಕ್ ಡೌನ್ ಜಾರಿಗೊಳಿಸಿದ್ದು, ಜೂನ್ 30 ಕ್ಕೆ 5ನೇ ಹಂತದ ಲಾಕ್‌ಡೌನ್ ಅಂತ್ಯವಾಗಲಿದೆ.

ಆದ್ರೆ, 5 ಹಂತದ ಲಾಕ್‌ಡೌನ್‌ನಲ್ಲಿ ಬಹುತೇಕ ಸಡಿಲಿಕೆ ನೀಡಲಾಗಿದ್ದು, ಬಹುತೇಕ ಎಲ್ಲಾ ಚಟುವಟಿಕೆಗಳು ಆರಂಭವಾಗಿವೆ. ಶಾಲಾ-ಕಾಲೇಜು ಮಾತ್ರ ಆರಂಭಕ್ಕೆ ಅನುಮತಿ ನೀಡಿಲ್ಲ.

ಜುಲೈನಲ್ಲಿ ಶಾಲಾ-ಕಾಲೇಜು ಆರಂಭಿಸಲು ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಆದ್ರೆ, ಇದಕ್ಕೆ ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಣ ತಜ್ಞರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

click me!